ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್‌ಗೆ ಮರಣ ದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮನವಿ ಮಾಡಿದೆ.
ಬುರ್ಹಾನ್‌ವಾನಿ ಎನ್‌ಕೌಂಟರ್ ಆದ 30 ನಿಮಿಷಗಳಲ್ಲಿ ನನ್ನನ್ನು ಬಂಧಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಪಾಸ್‌ಪೋರ್ಟ್ ಮಂಜೂರು ಮಾಡಿದ್ದರು ಹಾಗೂ ನಾನು ಅಪರಾಧಿ ಅಲ್ಲ ಎಂಬ ಕಾರಣಕ್ಕೆ ನನಗೆ ಹೇಳಿಕೆ ನೀಡಲು ಭಾರತ ಅವಕಾಶ ಮಾಡಿಕೊಟ್ಟಿತು ಎಂದು ಯಾಸಿನ್ ಮಲಿಕ್ ನ್ಯಾಯಾಲಯದಲ್ಲಿ ಹೇಳಿದ್ದಾನೆ. ಇದನ್ನೂ ಓದಿ: ಬರಾಮುಲ್ಲಾದಲ್ಲಿ ಎನ್‌ಕೌಂಟರ್ – 3 ಭಯೋತ್ಪಾದಕರ ಹತ್ಯೆ, ಪೊಲೀಸ್ ಹುತಾತ್ಮ,
Advertisement
Advertisement
1994ರಲ್ಲಿ ನಾನು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಗಾಂಧಿಯವರ ತತ್ವಗಳನ್ನು ಅನುಸರಿಸುತ್ತಿದ್ದೆ. ನಾನು ಕಾಶ್ಮೀರದಲ್ಲಿ ಅಹಿಂಸಾತ್ಮಕ ರಾಜಕೀಯ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.
Advertisement
ನಾನು ಈ ಹಿಂದೆ 7 ಪ್ರಧಾನಿಗಳೊಂದಿಗೆ ಕೆಲಸ ಮಾಡಿದ್ದೇನೆ. ಕಳೆದ 24 ವರ್ಷಗಳಲ್ಲಿ ಯಾವುದೇ ಭಯೋತ್ಪಾದನಾ ಚಟುವಟಿಕೆ ಅಥವಾ ಹಿಂಸಾಚಾರಗಳಲ್ಲಿ ಭಾಗಿಯಾಗಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಭಾರತೀಯ ಗುಪ್ತಚರ ಇಲಾಖೆಗೆ ಸವಾಲು ಹಾಕಿದ್ದಾನೆ. ಇದನ್ನೂ ಓದಿ: ಶೂಟೌಟ್‍ಗೂ ಮೊದಲೇ ಇನ್‍ಸ್ಟಾಗ್ರಾಮ್‍ನಲ್ಲಿ ಗನ್‍ಗಳ ಚಿತ್ರ ಪೋಸ್ಟ್ ಮಾಡಿದ್ದ ಆರೋಪಿ
Advertisement
ನಾನು ರಾಜಕೀಯದಿಂದ ನಿವೃತ್ತಿ ಹೊಂದಿ, ಮರಣದಂಡನೆಯನ್ನು ಸ್ವೀಕರಿಸುತ್ತೇನೆ ಎಂದು ಮಲಿಕ್ ಹೇಳಿದ್ದಾನೆ. ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ಯಾಸಿನ್ ಮಲಿಕ್ ತಪ್ಪೊಪ್ಪಿಕೊಂಡ ಹಿನ್ನೆಲೆ ಎನ್‌ಐಎ ಕೋಟ್ ಅವರನ್ನು ದೋಷಿ ಎಂದು ಘೋಷಿಸಿದೆ. ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು.