ಸಿನಿಮಾ ರಂಗದಿಂದ ದೂರವಿದ್ದು, ಸದ್ಯ ಮಗುವಿನ ಪಾಲನೆ ಪೋಷನೆಯಲ್ಲಿ ಬ್ಯುಸಿಯಾಗಿರುವ ನಟಿ ಸಂಜನಾ ಗಲ್ರಾನಿ (Sanjana Galrani) ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸಂಜನಾಗೆ ಕೊಲೆ ಬೆದರಿಕೆ (Death threat) ಹಾಕಲಾಗಿದೆ ಎಂದು ಆರೋಪ ಮಾಡಿರುವ ಅವರು, ಬೆದರಿಕೆ ಹಾಕಿದವರು ವಿರುದ್ಧ ದೂರು ದಾಖಲಿಸಿದ್ದಾರೆ.
ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ಗಲಾಟೆ ನಡೆದಿದ್ದು, ಕೊಲೆ ಮಾಡ್ತಿನಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಸಂಜನಾ ಇಂದಿರಾನಗರ ಠಾಣೆಗೆ ದೂರು ನೀಡಿದ್ದಾರೆ. ಇಂದಿರಾನಗರದ (Indiranagar) ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿ ಮನೆ ಬಳಿ ಯಶೋಧಮ್ಮ ಹಾಗೂ ರಾಜಣ್ಣ ಎಂಬುವವರ ಮನೆಯೂ ಇದೆ. ಇವರ ಮೇಲೆಯೇ ಸಂಜನಾ ದೂರು ನೀಡಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ನಮ್ಮ ಭಾರತದ ಹೆಮ್ಮೆ ಎಂದು ಹಾಡಿ ಹೊಗಳಿದ ಕಂಗನಾ
ಯಶೋಧಮ್ಮ ಹಾಗೂ ರಾಜಣ್ಣ ಎನ್ನುವವರು ರಸ್ತೆಗೆ ಅಡ್ಡಲಾಗಿ ಕಾರುಗಳನ್ನ ನಿಲ್ಲಿಸ್ತಾರಂತೆ. ಇದನ್ನ ಪ್ರಶ್ನೆ ಮಾಡಿದ್ರೆ ಕೊಲೆ ಮಾಡ್ತಿನಿ, ನಾವು ನಲವತ್ತು ವರ್ಷದಿಂದ ವಾಸ ಇದ್ದೀವಿ ಅಂತ ಆವಾಜ್ ಹಾಕಿದ್ದಲ್ಲದೆ, ವೇಶ್ಯೆ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ ಸಂಜನಾ ಗಲ್ರಾನಿ. ಸದ್ಯ ನ್ಯಾಯಲಯದ ಅನುಮತಿ ಮೇರೆಗೆ ಎಫ್ಐಆರ್ (FIR) ದಾಖಲಾಗಿದೆ.