ಕಾಬೂಲ್: ಉತ್ತರ ಅಫ್ಘಾನಿಸ್ತಾನದಲ್ಲಿ (Afghanistan) ಸುರಿಯುತ್ತಿರುವ ಧಾರಾಕಾರ ಮಳೆಯ (Rain) ಪರಿಣಾಮ ಉಂಟಾದ ಹಠಾತ್ ಪ್ರವಾಹದಿಂದ (Flood) ಕನಿಷ್ಠ 330ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಪ್ರವಾಹದಿಂದ ಸುಮಾರು 1,000ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಪ್ರವಾಹದಿಂದಾಗಿ ಹಲವಾರು ಜನ ಗಾಯಗೊಂಡಿದ್ದಾರೆ. ಅಲ್ಲದೇ ಇನ್ನೂ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಿಒಕೆ ನಿವಾಸಿಗಳ ಮೇಲೆ ಪಾಕ್ ದಬ್ಬಾಳಿಕೆ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ
ಪ್ರವಾಹದಲ್ಲಿ ಸಾವಿಗೀಡಾದ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಇಲಾಖೆಯ ನಿರ್ದೇಶಕ ಹೆದಯತುಲ್ಲಾ ಹಮ್ದರ್ದ್ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಂದ ವಾಯುಪಡೆ ಜನರನ್ನು ಸ್ಥಳಾಂತರಿಸುತ್ತಿದೆ. ಗಾಯಗೊಂಡ ನೂರಾರು ಕ್ಕೂ ಹೆಚ್ಚು ಜನರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮೋದಿಗೆ ಮತ್ತೊಂದು ಯುದ್ಧದಲ್ಲಿ ಸೋಲು: ಕೇಜ್ರಿವಾಲ್ ಜೈಲಿಂದ ಹೊರಬಂದಿದ್ದಕ್ಕೆ ಪಾಕ್ ನಾಯಕ ಸಂತಸ