ಭೋಪಾಲ್: ಮಧ್ಯಪ್ರದೇಶದ (Madhya Pradesh) ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60 ಮಂದಿ ಗಾಯಗೊಂಡಿದ್ದಾರೆ.
ಪಟಾಕಿ ಕಾರ್ಖಾನೆಯ ಸ್ಫೋಟದ ತೀವ್ರತೆಗೆ ಸುಮಾರು ಅರವತ್ತು ಮನೆಗಳು ನಾಶವಾಗಿವೆ. ಕಾರ್ಖಾನೆಯಲ್ಲಿ ನಿರಂತರ ಸ್ಫೋಟಗಳು ಸಂಭವಿಸಿದ ಕಾರಣ 100ಕ್ಕೂ ಹೆಚ್ಚು ಮನೆಗಳಲ್ಲಿದ್ದ ಜನರನ್ನು ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಘಟನೆಯಲ್ಲಿ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ (Fire Accident) ಎಂದು ವರದಿಯಾಗಿದೆ. ಇದನ್ನೂ ಓದಿ: ತಿಂಡಿ ಮಾಡದ್ದಕ್ಕೆ ತಾಯಿಯನ್ನು ಹತ್ಯೆಗೈದ ಕೇಸ್‍ಗೆ ಟ್ವಿಸ್ಟ್ – ಕೊಲೆ ಮಾಡಿದ್ದು ಮಗನಲ್ಲ, ತಂದೆಯಿಂದಲೇ ಕೃತ್ಯ
Advertisement
Advertisement
ಆರಂಭದಲ್ಲಿ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದರು. ಇದೀಗ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
Advertisement
ಬೆಂಕಿ ನಂದಿಸಲು ಇಂದೋರ್ ಮತ್ತು ಭೋಪಾಲ್‍ನಿಂದ ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಇಂದೋರ್‌ನ ವೈದ್ಯಕೀಯ ಕಾಲೇಜು ಹಾಗೂ ಏಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ (Mohan Yadav) ಎಕ್ಸ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಖ್ಯಾತ ಹಾಕಿ ಆಟಗಾರನಿಂದ ಅಪ್ರಾಪ್ತೆಯ ಮೇಲೆ ರೇಪ್!