– ನಿನ್ನೆಯಿಂದ 6 ಬಾರಿ ಭೂಕಂಪ, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ
ನೇಪಿಟಾವ್/ಬ್ಯಾಂಕಾಕ್: ಮಯನ್ಮಾರ್‌ನಲ್ಲಿ (Myanmar) ನಿನ್ನೆಯಿಂದ 6 ಬಾರಿ ಭೂಕಂಪ ಸಂಭವಿಸಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಕ್ಷಣದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ರಸ್ತೆಗಳಲ್ಲೇ ಚಿಕಿತ್ಸೆ:
ಮ್ಯಾನ್ಮಾರ್‌ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
Nature doesn’t ask. Nature acts.#NatureIsMetal #Earthquake pic.twitter.com/gd6a2bsFYx
— Nature Is Metal (@NIMactual) March 28, 2025
ಭಾರತದಿಂದ ನೆರವಿನ ಹಸ್ತ
ಸಂತ್ರಸ್ತವಾಗಿರುವ ಮ್ಯಾನ್ಮಾರ್‌ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್‌ಗೆ ಕಳುಹಿಸಲಾಗುತ್ತಿದೆ.
hole Bangkok shook like crazy 😳#earthquake #deprem
— Furkii (@naylonelon) March 28, 2025
ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ:
ಮ್ಯಾನ್ಮಾರ್, ಥಾಯ್ಲೆಂಡ್‌ನಲ್ಲಿ ಭೂಂಕಪದ ಬೆನ್ನಲ್ಲೇ ಶನಿವಾರ ಮುಂಜಾನೆ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಮುಂಜಾನೆ 5:16ಕ್ಕೆ ಭೂಮಿ ಕಂಪಿಸಿದ್ದು, ಭೂಮಿಯಿಂದ 180 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದೆ. ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಫ್ಘಾನಿಸ್ತಾನದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.