ಇಸ್ಲಾಮಾಬಾದ್: ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತನಾಮರಾಗಿದ್ದಾರೆ.
ಏರ್ಸ್ಟ್ರೈಕ್ನಿಂದ 22 ಲೋಕಸಭಾ ಸೀಟ್ ಗೆಲ್ತೇವೆ ಅಂದಿರೋದನ್ನು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ (ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್) ಪಕ್ಷ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದೆ. 22 ಸೀಟ್ ಗೆಲ್ಲೋ ಸಲುವಾಗಿ ಇಷ್ಟು ಪ್ರಾಣಗಳ ಜೊತೆ ಬಿಜೆಪಿ ಚೆಲ್ಲಾಟ ಆಡ್ತಿದೆ. ಯುದ್ಧ ಅನ್ನೋದು ಚುನಾವಣೆಯ ಆಯ್ಕೆನಾ ಎಂದು ಪ್ರಶ್ನಿಸಿದೆ.
ಅಲ್ಲದೆ, ಪಾಕಿಸ್ತಾನದ ಚಾನೆಲ್‍ಗಳಲ್ಲಿ ಕೂಡ ಈ ಕುರಿತು ಡಿಬೇಟ್ ಆಗಿದೆ. ಇದು ಬಿಜೆಪಿ ಹೈಕಮಾಂಡ್ ನಾಯಕರಿಗೆ ತೀವ್ರ ಮುಜುಗರ ತಂದಿದೆ. ಈ ಕೂಡಲೇ ಕೇಂದ್ರ ಸಚಿವ ವಿಕೆ ಸಿಂಗ್, ಬಿಎಸ್‍ವೈಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಿಎಸ್‍ವೈ ಹೇಳಿಕೆಯಿಂದ ಭಿನ್ನವಾಗಿರಲು ಬಯಸುತ್ತೇನೆ. ಕೇವಲ ಹೆಚ್ಚುವರಿ ಸೀಟ್ ಗೆಲ್ಲಲು ಇಷ್ಟೆಲ್ಲ ಮಾಡ್ತಿಲ್ಲ. ಇದು ದೇಶವನ್ನು ಕಾಪಾಡಿಕೊಳ್ಳುವ ಕ್ರಮ ಎಂದಿದ್ದಾರೆ.
ಇತ್ತ ಆರ್‍ಎಸ್‍ಎಸ್ ಸಹ, ಸೇನೆಯ ಕಾರ್ಯಾಚರಣೆಯನ್ನು ರಾಜಕೀಯದೊಂದಿಗೆ ಬೆಸೆಯಬೇಡಿ ಅಂತ ಖಡಕ್ ವಾರ್ನಿಂಗ್ ಕೊಟ್ಟು ಸ್ಪಷ್ಟನೆ ಕೇಳಿದೆ.
ಬಿಎಸ್‍ವೈ ಹೇಳಿದ್ದೇನು..?
ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದು ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ ಹೇಳಿದ್ದರು.
https://www.youtube.com/watch?v=-HDTIgjGwJg
https://www.youtube.com/watch?v=LLIlyAySnxg
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv