Connect with us

ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ

ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ

ಬೆಳಗಾವಿ: ತಂದೆ ಮಾಡಿದ ಸಾಲಕ್ಕೆ ಹೆದರಿ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಡೆದಿದೆ.

ಮಾರುತಿ ಅಜ್ಜನಕಟ್ಟಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತನ ತಂದೆ ವಿವಿಧ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸುಮಾರು 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದ್ದರಿಂದ ಮಗ ಸಾಲದ ಕಿರುಕುಳವನ್ನು ಸಹಿಸಲಾಗದೇ ಮನನೊಂದು ಹೆದರಿ ಆತ್ಮಹತ್ಯೆಗೆ ಶರಣಾನಾಗಿದ್ದಾರೆ.

ಈ ಘಟನೆ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಂದೆ ಸಾಲ ಮಾಡಿ ದೇಶ ಸುತ್ತಾಡಲು ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement
Advertisement