ಇಸ್ಲಾಮಾಬಾದ್: ಮಾರ್ಚ್ 03, 2009 ಪಾಕಿಸ್ತಾನದಲ್ಲಿ ಶ್ರೀಲಂಕಾ ಕ್ರಿಕೆಟ್ ಆಟಗಾರರ ಮೇಲೆ ಭಯೋತ್ಪಾದಕ ಪಡೆ ದಾಳಿ ನಡೆಸಿತ್ತು. ಇದಾಗಿ ಇಂದಿಗೆ 10 ವರ್ಷಗಳು ಕಳೆದರು ಕೂಡ ಪಾಕಿಸ್ತಾನದಲ್ಲಿ ಮತ್ತೆ ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳನ್ನು ಆರಂಭಿಸಲು ಹರಸಾಹಸ ಪಡುತ್ತಿದೆ.
ಸುಮಾರು 12 ಮಂದಿಯ ಭಯೋತ್ಪಾದಕರ ತಂಡ ಶ್ರೀಲಂಕಾ ಕ್ರಿಕೆಟಿಗರು ಹಾಗೂ ಅಂಪೈರ್ ಗಳ ಮೇಲೆ ಲಹೋರ್‍ನ ಗಢಾಪಿ ಕ್ರೀಡಾಂಗಣದ ಬಳಿ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಘಟನೆಯಲ್ಲಿ 8 ಪೊಲೀಸರು ಸಾವನ್ನಪ್ಪಿದ್ದರೆ, 6 ಮಂದಿ ಗಾಯಗೊಂಡಿದ್ದರು. ಈ ವೇಳೆ ಶ್ರೀಲಂಕಾ ತಂಡಕ್ಕೆ ಇಂಗ್ಲೆಂಡ್‍ನ ಬೇಲಿಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉಗ್ರರು ಸಿಡಿಸಿದ್ದ ಗುಂಡು ಬಸ್ ಗ್ಲಾಸ್ ಸೀಳಿತ್ತು. ಪರಿಣಾಮ ಗಾಜಿನ ಚುರು ತಂಡದ ಸಹಾಯಕನಾಗಿದ್ದ ಫಾಬ್ರ್ರಾಸ್ ಎಂಬವರ ಭುಜಕ್ಕೆ ಹೊಕ್ಕಿತ್ತು. ಇಂದಿಗೂ ಘಟನೆಯನ್ನು ನೆನೆದರೆ ಫಾಬ್ರ್ರಾಸ್ ಬೆಚ್ಚಿ ಬೀಳುತ್ತಾರೆ.
Advertisement
Advertisement
ಇದಾದ ಬಳಿಕ 2015ರ ವರೆಗೂ ಮತ್ತೆ ಆ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ ನಡೆದಿರಲಿಲ್ಲ. ಆದರೆ 2015ರಲ್ಲಿ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಮೊಂಡು ಧೈರ್ಯ ಮಾಡಿ ಕ್ರಿಕೆಟ್ ಆಡಲು ಮುಂದಾಗಿತ್ತು, ಆದರೆ ಅಂದು ಕೂಡ ಪಂದ್ಯ ನಡೆಯುವ ವೇಳೆ ಸ್ಟೇಡಿಯಂ ಹೊರ ಭಾಗದಲ್ಲಿ ಉಗ್ರ ಮಾನವ ಬಾಂಬ್ ಸ್ಫೋಟಿಸಿ ಓರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಲಿ ಪಡೆದಿದ್ದ. ಈ ಘಟನೆ ಮತ್ತೆ ಪಾಕ್ ಕ್ರಿಕೆಟ್ ಆಡಲು ಆಸುರಕ್ಷಿತ ಎಂಬುವುದು ಖಚಿತವಾಯ್ತು. ಪರಿಣಾಮ ಐಸಿಸಿ ಕ್ರಿಕೆಟ್ ಟೂರ್ನಿಗಳನ್ನು ಏರ್ಪಡಿಸುವ ಅವಕಾಶವನ್ನು ಪಾಕಿಸ್ತಾದಿಂದ ಕಿತ್ತುಕೊಂಡಿತ್ತು.
Advertisement
2011ರ ದಾಳಿ ಬಳಿಕ ಪಾಕಿಸ್ತಾನದಲ್ಲಿ ಇದುವರೆಗೂ 12 ಅಂತರಾಷ್ಟ್ರಿಯ ಕ್ರಿಕೆಟ್ ಪಂದ್ಯಗಳು ಮಾತ್ರ ನಡೆಸಿದ್ದು, ಇದರಲ್ಲಿ 9 ಸಮಿತಿ ಪಂದ್ಯಗಳಾಗಿವೆ. ಪ್ರಮುಖವಾಗಿ ಜಿಂಬಾಬ್ವೆ 5 ಪಂದ್ಯ, ವೆಸ್ಟ್ ಇಂಡೀಸ್/ ವಲ್ರ್ಡ್ ಇಲೆವೆನ್ ಮತ್ತು ಶ್ರೀಲಂಕಾ 1 ಪಂದ್ಯದಲ್ಲಿ ಮಾತ್ರ ಆಡಿದೆ.
Advertisement
ಕೊನೆಯದಾಗಿ ಒತ್ತಡದ ಮೇಲೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಪಾಕ್‍ನ ಕರಾಚಿ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ತಂಡ 3 ಟಿ20 ಪಂದ್ಯಗಳನ್ನು ಆಡಿದೆ. ಆದರೆ ಇದರ ಬೆನ್ನಲ್ಲೇ ನಡೆಯಬೇಕಿದ್ದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಸರಣಿಯನ್ನು ಆಡಲು ಎರಡು ರಾಷ್ಟ್ರ ನಿರಾಕರಿಸಿತ್ತು.
Today in 2009, buses carrying Sri Lankan cricketers & umpires were fired upon by 12 gunmen, near the Gaddafi Stadium in Lahore, Pakistan.
Since then just 12 international cricket matches have been hosted by Pakistan – 9 T20Is & 3 ODIs.
5 by Zim
3 by W Indies/World XI
1 by S Lanka
— Mohandas Menon (@mohanstatsman) March 3, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv