ಹಾವೇರಿ: ಕೋವಿಡ್ ಕಾರಣಕ್ಕೆ ಮುಂದೂಡಲಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲೇ ನಡೆಸಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
Advertisement
ಹಾವೇರಿಯಲ್ಲಿ ಸೋಮವಾರ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಹಾವೇರಿಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವುದು. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
Advertisement
ಈಗಾಗಲೆ ಸಿಎಂ ಬೆಳಗಾವಿಯಲ್ಲಿ ಅಧಿವೇಶನ ಮಾಡುವ ಬಗ್ಗೆ ಹೇಳಿದ್ದಾರೆ. ಈ ವೇಳೆ ಸಮ್ಮೇಳನದ ವಿಚಾರ ಪ್ರಸ್ತಾಪಿಸಲಾಗುವುದು ಎಂದರು.
Advertisement
Advertisement
ಎರಡು ವರ್ಷಗಳ ಕಾಲ ಅಧಿವೇಶನ ನಡೆದಿಲ್ಲ. ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು. ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸಹ ಪತ್ರವನ್ನು ಬರೆದಿದ್ದಾರೆ. ಈ ಬಗ್ಗೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಅಸ್ಪೃಶ್ಯತೆ ಆಚರಣೆ ಘಟನೆ ಬೆಳಕಿಗೆ ಬಂದರೆ ನಿರ್ದಾಕ್ಷಿಣ್ಯ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ
ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, “ಕಾದು ನೋಡಿ” ಎಂದು ನಗುನಗುತ್ತೇ ಉತ್ತರಿಸಿದರು.