ಕೋರ್ಟ್ ಆದೇಶದ ಬಳಿಕ ಜನಾರ್ದನ ರೆಡ್ಡಿ ಶಾಸಕತ್ವ ಅನರ್ಹತೆ ಬಗ್ಗೆ ತೀರ್ಮಾನ – ಯು.ಟಿ.ಖಾದರ್

Public TV
1 Min Read
UT Khader

ಬೆಂಗಳೂರು: ಕೋರ್ಟ್‌ನಿಂದ ಆದೇಶ ಬಂದ ಬಳಿಕ ಶಾಸಕ ಜನಾರ್ದನ ರೆಡ್ಡಿ (Janardhana Reddy) ಅವರ ಶಾಸಕತ್ವ ಅನರ್ಹತೆ ಬಗ್ಗೆ ತೀರ್ಮಾನ ಮಾಡುವುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ (UT Khader) ತಿಳಿಸಿದರು.ಇದನ್ನೂ ಓದಿ: ಬಿಬಿಎಂಪಿ ಕಾರ್ಮಿಕರಿಗೆ ಬಿಎಂಟಿಸಿ ಬಸ್ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

ಸಿಬಿಐ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನಾರ್ದನ ರೆಡ್ಡಿಗೆ ಶಿಕ್ಷೆ ಆಗಿರುವ ವಿಚಾರ ಮಾಧ್ಯಮ, ಪತ್ರಿಕೆಗಳ ಮೂಲಕ ನನಗೆ ಗೊತ್ತಾಗಿದೆ. ಮಾಧ್ಯಮ, ಪತ್ರಿಕೆಗಳನ್ನು ನೋಡಿ ನಾನು ಏನು ನಿರ್ಧಾರ ಮಾಡಲು ಸಾಧ್ಯವಿಲ್ಲ. ಕೋರ್ಟ್‌ನಿಂದ ಆದೇಶ ಬರಲಿ. ಆದೇಶ ಬಂದ ಬಳಿಕ ಕಾನೂನು ಪ್ರಕಾರ, ಸಂವಿಧಾನದ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

ಇದೇ ವೇಳೆ 18 ಶಾಸಕರ ಅಮಾನತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರು ನನಗೆ ಪತ್ರ ಬರೆದಿದ್ದರು. ನಾನು ಊರಿನಲ್ಲಿ ಇರಲಿಲ್ಲ. ರಾಜ್ಯಪಾಲರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಆದಷ್ಟು ಬೇಗ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ಮಾಡುತ್ತೀನಿ ಎಂದು ತಿಳಿಸಿದರು.ಇದನ್ನೂ ಓದಿ: ಯುದ್ಧವು ದೇಶದ ಖ್ಯಾತಿಗೆ ಒಳ್ಳೆಯದಲ್ಲ: ‘ಆಪರೇಷನ್ ಸಿಂಧೂರ’ ಬಗ್ಗೆ ಸಂಜನಾ ಗಲ್ರಾನಿ ಪೋಸ್ಟ್

Share This Article