ನವದೆಹಲಿ: ಜನೌಷಧಿ ಕೇಂದ್ರಗಳ (Jan Aushadhi Kendra) ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಮಂಗಳವಾರ ದೆಹಲಿಯ (Delhi) ಕೆಂಪುಕೋಟೆಯಲ್ಲಿ (Red Fort) 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ಜನರಿಗೆ ಶಕ್ತಿಯನ್ನು ನೀಡಿದೆ. ಅದರಲ್ಲೂ ಮಧ್ಯಮ ವರ್ಗದ ಜನರಿಗೆ ಹೊಸ ಶಕ್ತಿಯನ್ನು ನೀಡಿದೆ. ಯಾರಿಗಾದರೂ ಮಧುಮೇಹವಿದ್ದರೆ ಮಾಸಿಕ 3,000 ರೂ. ಬಿಲ್ ಬರುತ್ತದೆ. ಜನೌಷಧಿ ಕೇಂದ್ರಗಳ ಮೂಲಕ 100 ರೂ. ಬೆಲೆಯ ಔಷಧಿಗಳನ್ನು ಕೇವಲ 10ರಿಂದ 15 ರೂ.ಗೆ ನೀಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ: ಮುಂದಿನ ವರ್ಷ ಕೆಂಪು ಕೋಟೆಯಲ್ಲಿ ಮತ್ತೆ ಸಿಗೋಣ ಎಂದಿದ್ದ ಮೋದಿಗೆ ಖರ್ಗೆ ಟಾಂಗ್
Advertisement
Advertisement
ಇದೀಗ ಜನೌಷಧಿ ಕೇಂದ್ರಗಳನ್ನು 10,000 ದಿಂದ 25,000ಕ್ಕೆ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ. ಎಲ್ಲರಿಗೂ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳು ಲಭ್ಯವಾಗುವಂತೆ ಮಾಡಲು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ (Covid) ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಸಾಮರ್ಥ್ಯವನ್ನು ಜಗತ್ತು ಕಂಡಿದೆ. ಇತರೆ ದೇಶಗಳ ಪೂರೈಕೆ ಸರಪಳಿಗಳು ಅಡ್ಡಿಪಡಿಸಿದಾಗ ನಾವು ಪ್ರಪಂಚದ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿ ಕುರ್ಚಿಯಲ್ಲಿ ಸಂದೇಶ – ಏನಿತ್ತು?
Advertisement
Advertisement
ನಮ್ಮ ಬದ್ಧತೆಯಿಂದಾಗಿ ಜಗತ್ತು ಈಗ ನಮ್ಮನ್ನು ನೋಡುತ್ತಿದೆ. ಕೋವಿಡ್ ಬಳಿಕ ಭಾರತ ವಿಶ್ವಮಿತ್ರವಾಗಿ ಹೊರಹೊಮ್ಮಿದೆ. ಕೋವಿಡ್ ನಂತರ ಭಾರತ ದೇಶವು ಒಂದು ಭೂಮಿ, ಒಂದು ಆರೋಗ್ಯ ವಿಧಾನವನ್ನು ಪ್ರತಿಪಾದಿಸಿದೆ. ರೋಗಕ್ಕೆ ಸಂಬಂಧಿಸಿದಂತೆ ಮನುಷ್ಯರು, ಪ್ರಾಣಿಗಳು ಮತ್ತು ಸಸ್ಯಗಳನ್ನು ಸಮಾನವಾಗಿ ಕಂಡಾಗ ಮಾತ್ರ ಸಮಸ್ಯೆಗಳು ಬಗೆಹರಿಯುತ್ತದೆ ಎಂದರು. ಇದನ್ನೂ ಓದಿ: ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ 1,000 ವರ್ಷ ಭಾರತಕ್ಕೆ ದಿಕ್ಕು ತೋರಲಿದೆ: ಮೋದಿ
Web Stories