ಶಿವಮೊಗ್ಗ: ಹಾವೇರಿ (Haveri), ರಾಣೇಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳ ಬಹುಗ್ರಾಮ ನದಿ ನೀರು ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ (Drinking Water) ಪೂರೈಕೆಗೆ ಭದ್ರಾ ಜಲಾಶಯದಿಂದ (Bhadra Dam) ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ.
ತುಂಗಭದ್ರಾ ನದಿಯ ನೀರನ್ನು ಅವಲಂಬಿಸಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶಿವಮೊಗ್ಗದ ಭದ್ರಾವತಿ ಬಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 18ರಿಂದ 23ರವರೆಗೆ ಪ್ರತಿದಿನ 2 ಸಾವಿರ ಕ್ಯೂಸೆಕ್‌ನಂತೆ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಮುಷ್ಕರಕ್ಕೂ ಮುನ್ನವೇ BMTC ನೌಕರರಿಗೆ ಗುಡ್‌ನ್ಯೂಸ್ – 11 ತಿಂಗಳ ಹಿಂಬಾಕಿ ವೇತನ ರಿಲೀಸ್
ಮೇಲೆ ತಿಳಿಸಿದ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್, ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಇದನ್ನೂ ಓದಿ: ಹೈಕೋರ್ಟ್‌ನಿಂದ ಐತಿಹಾಸಿಕ ತೀರ್ಪು – ಭೋಜಶಾಲೆಯಲ್ಲಿ ಹಿಂದೂಗಳಿಂದ ವಿಶೇಷ ಪೂಜೆ

