ಚಿಕ್ಕೋಡಿ: ರೈತರಿಗೆ (Farmers) 7 ಗಂಟೆ ಅನಿಯಮಿತ ವಿದ್ಯುತ್ ಪೂರೈಸಬೇಕು ಹಾಗೂ ಬೆಳಗಾವಿ ಜಿಲ್ಲೆಯನ್ನ ಬರಪೀಡಿತ ಜಿಲ್ಲೆಯಾಗಿ ಘೋಷಣೆಗೆ ಮಾಡಬೇಕು ಎಂದು ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ (Chikkodi) ಬಿಜೆಪಿಯಿಂದ ಪ್ರತಿಭಟನೆ (BJP Protest) ನಡೆಸಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಚಿಕ್ಕೋಡಿ ಉಪ ವಿಬಾಗಾಧಿಕಾರಿಗಳ ಕಚೇರಿಗೆ ತೆರಳಿ ಚಿಕ್ಕೋಡಿ ಉಪವಿಭಾಗಧಿಕಾರಿ ಮಾಧವ್ ಗಿತ್ತೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಚಂದ್ರಯಾನ-3ರ ಯಶಸ್ಸಿಗೆ ಕೈಜೋಡಿಸಿದ ಬೀದರ್‌ನ ಕುರಿಗಾಯಿ ಸಹೋದರರು
Advertisement
Advertisement
ಅವೈಜ್ಞಾನಿಕ ವಿದ್ಯುತ್ ದರ ಕಡಿಮೆ ಮಾಡಬೇಕು. ನಿಯಮಿತವಾಗಿ 7 ಗಂಟೆ ಪಂಪ್ ಸೆಟ್‌ಗಳಿಗೆ ವಿದ್ಯುತ್ ಪೂರೈಸಬೇಕು ಹಾಗೂ ವಾಡಿಕೆ ಮಳೆಯಾಗದ ಕಾರಣ ಬೆಳಗಾವಿ ಜಿಲ್ಲೆಯನ್ನ ಬರಪೀಡಿತವಾಗಿ ಘೋಷಿಸುವಂತೆ ಮನವಿ ಮೂಲಕ ಸರ್ಕಾರವನ್ನ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಿಸಿದ್ದ ಕೇರಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ – ಕನ್ನಡ ಶಿಕ್ಷಕರನ್ನೇ ನೇಮಿಸುವಂತೆ ಆದೇಶ
Advertisement
ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧ:
ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಪಕ್ಷದಿಂದ ಎಲ್ಲಿಯಾದರೂ ಸ್ಪರ್ಧಿಸಲು ಸಿದ್ಧ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಲೋಕಸಭಾ ಸ್ಪರ್ಧೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನೇನು ಸನ್ಯಾಸಿ ಅಲ್ಲ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋತು ಒಂದೂವರೆ ವರ್ಷ ಆಗಿದೆ.
Advertisement
ರಾಜಕಾರಣದಲ್ಲಿ ಜನರಿಗೆ ಸಹಾಯ ಮಾಡಲು ರಾಜಕೀಯ ಅಧಿಕಾರ ಅವಶ್ಯಕ. ವೈಯಕ್ತಿಕ ನನಗಾಗಿ ಅಲ್ಲ, ಜನರಿಗಾಗಿ ರಾಜಕೀಯ ಅಧಿಕಾರವಿದ್ದರೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು ಎಂದು ನನ್ನ ಇಚ್ಛೆ. ಪಕ್ಷ ಅವಕಾಶ ಕೊಟ್ಟರೆ ಬೆಳಗಾವಿ, ಚಿಕ್ಕೋಡಿ ಎಲ್ಲಿ ಕೊಟ್ಟರೂ ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ.
Web Stories