ಬೆಂಗಳೂರು: ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಟ್ವೀಟ್ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿ ನಮ್ಮ ರೈತ ಸಮುದಾಯ ಒಣ ಬೇಸಾಯವನ್ನೂ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇನ್ನು ಕಾಲಹರಣ ಮಾಡದೆ, ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ರೈತರಿಗೆ ಪರಿಹಾರ ನೀಡಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಕೂಡ ಈ ಬಗ್ಗೆ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ತೀವ್ರ ಕ್ಷಾಮ ನೋಡಬೇಕಾಗುತ್ತೆ. ಆಗಸ್ಟ್ ನಲ್ಲಿ ಮಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಬರಗಾಲ ಘೋಷಣೆ ಮಾಡಿಲ್ಲ ಅಂತ ಕಿಡಿಕಾರಿದ್ದಾರೆ. ಇನ್ನು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ 100 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಚಿಂತನೆ ಇದೆ, ಆದರೆ ಮೋಡ ಬಿತ್ತನೆ ಬಗ್ಗೆ ಪ್ರಸ್ತಾಪ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ಭೇಟಿಯಾದ ರೇಣುಕಾಚಾರ್ಯ- ಕುತೂಹಲ ಮೂಡಿಸಿದ ಮಾತುಕತೆ
ಈ ಮಧ್ಯೆ ರೈತರಿಗೆ 7 ಗಂಟೆ ಅನಿಯಮಿತ ವಿದ್ಯುತ್ ಪೂರೈಸಬೇಕು. ಬೆಳಗಾವಿ ಜಿಲ್ಲೆಯನ್ನ ಬರಪೀಡಿತ ಜಿಲ್ಲೆಯಾಗಿ ಘೋಷಣೆಗೆ ಮಾಡಬೇಕು ಎಂದು ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
Web Stories