– ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಆಗಲು ಬಿಡಬಾರದು ಎಂದ ಶಾಸಕ
ವಿಜಯಪುರ: ವಕ್ಫ್ ಬೋರ್ಡ್‌ನಿಂದ (Waqf Board ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನ ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ (Basangouda Patil Yatnal) ಪ್ರಧಾನಿ ಮೋದಿಗೆ (Narendra Modi) ಪತ್ರ ಬರೆದಿದ್ದಾರೆ.
Advertisement
ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ. ವಕ್ಫ್ ಕಾನೂನು ಅಸಮಾನತೆ, ಕ್ರೂರತೆಯನ್ನು ಒಳಗೊಂಡಿದೆ. ವಕ್ಫ್ ಬೋರ್ಡ್‌ಗೆ ಅನಿಯಂತ್ರಿತ, ಪರಿಮಿತ ಅಧಿಕಾರ ನೀಡಲಾಗಿದೆ ಎಂದು ಪತ್ರದಲ್ಲಿ ಶಾಸಕರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ
Advertisement
ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ಪ ಬುದ್ನಿ ಎಂಬುವವರು ಕಳೆದ ವರ್ಷ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು!