ಶಿವಮೊಗ್ಗ: ಇಲ್ಲಿನ (Shivamogga) ರವೀಂದ್ರ ನಗರದ ಮನೆಯೊಂದರಲ್ಲಿ ಮಹಿಳೆ (Woman) ಮತ್ತು ಅವರ ಸಾಕು ನಾಯಿಯ (Pet Dog) ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಪ್ರಭಾವತಿ (57) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ವೃದ್ಧೆ ಮೃತಪಟ್ಟಿದ್ದಾರೆ. ಅವರ ಸಾಕು ನಾಯಿ ಕೂಡ ಮನೆಯ ಒಳಗೆ ಸಾವನ್ನಪ್ಪಿದೆ. ಇಂದು ಅಕ್ಕಪಕ್ಕದ ಮನೆಯವರಿಗೆ ವಾಸನೆ ಬಂದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಸಾಲ ಕೊಟ್ಟ 10 ಸಾವಿರ ಮರಳಿ ಬರಲಿಲ್ಲ – ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ
ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ
