ನವದೆಹಲಿ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‍ಯು) ಕ್ಯಾಂಪಸ್‍ನ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಘಟನೆ ಕುರಿತಂತೆ ಶುಕ್ರವಾರ ಸಂಜೆ 6.30ರ ಸುಮಾರಿಗೆ ದೆಹಲಿ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವ ಕೊಳೆತಿದ್ದು, ಕೆಲ ದಿನಗಳ ಹಿಂದೆಯೇ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲದೇ ವ್ಯಕ್ತಿಗೆ ಸುಮಾರು 40-45 ವರ್ಷ ವಯಸ್ಸಾಗಿರಬಹುದು. ಸದ್ಯ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5 ವರ್ಷದ ಬಾಲಕಿಯ ಮಾದರಿಯನ್ನು ಮಂಕಿಪಾಕ್ಸ್ ಪರೀಕ್ಷೆಗೆ ಕಳುಹಿಸಿದ ವೈದ್ಯರು
ಇದೀಗ ಪತ್ತೆಯಾಗಿರುವ ಶವ ವಿದ್ಯಾರ್ಥಿಯದ್ದೋ, ಅಧ್ಯಾಪಕರದ್ದೋ ಅಥವಾ ಹೊರಗಿನವರದ್ದೋ ಎಂದು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರಿನಲ್ಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್ – ಓರ್ವ ಅರೆಸ್ಟ್, ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು