ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಅನ್ನೋ ವಿಚಾರ ಕೇಳಿ ಬಂದ ಬೆನ್ನಲ್ಲೆ ವಾಟ್ಸಪ್ ನಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಹರಿದಾಡ್ತಿದೆ.
ಮಂಡ್ಯದ ನಿಜವಾದ ಮನೆ ಮಗಳು ಯಾರು? ಲಕ್ಷ್ಮಿ ಅಶ್ವಿನ್ ಗೌಡ ಅಥವಾ ಸುಮಲತಾ ಎಂಬ ಚರ್ಚೆ ಎದ್ದಿದೆ. ಕಾಂಗ್ರೆಸ್ನಿಂದ ಸುಮಲತಾರನ್ನು ಕಣಕ್ಕಿಳಿಸಲು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಜೆಡಿಎಸ್ನಿಂದ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಚಾಲ್ತಿಗೆ ಬಂದಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಲಕ್ಷ್ಮಿ ಅಶ್ವಿನ್ ಗೌಡ ಅವರು ಕಳೆದ ವರ್ಷ ನವಂಬರ್ನಲ್ಲಿ ನಡೆದ ಲೋಕಸಭಾ ಉಪಚುನಾವಣೆಯ ಆಕಾಂಕ್ಷಿಯಾಗಿದ್ದರು. ಆದ್ರೆ ವರಿಷ್ಠರು ಎಲ್ಆರ್ ಶಿವರಾಮೇಗೌಡರಿಗೆ ಟಿಕೆಟ್ ನೀಡಿದ್ದರು. ಇದೀಗ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದಾದ್ರೆ ಅವರ ವಿರುದ್ಧ ಜೆಡಿಎಸ್ನಿಂದ ಲಕ್ಷ್ಮಿಅಶ್ವಿನ್ ಗೌಡರನ್ನ ನಿಲ್ಲಿಸುತ್ತಾರೆ. ಆ ಮೂಲಕ ಮಂಡ್ಯದ ನಿಜವಾದ ಮಗಳು ಎಂದು ಅಂಬಿ ಅಭಿಮಾನಿಗಳಿಗೆ ಸೆಡ್ಡು ಹೊಡೆಯುತ್ತಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ
ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರು ಸುಮಲತಾ ಅವರು ಮಂಡ್ಯದ ಗೌಡ್ತಿ ಅಲ್ಲ ಎಂಬ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯಿಂದ ಈ ಮನೆ ಮಗಳ ವಾದ ವಿವಾದ ಹುಟ್ಟಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಮನೆಮಗಳು ಯಾರು ಎನ್ನುವುದರ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ಬಿಜೆಪಿಯಿಂದ ಸ್ಪರ್ಧಿಸಲು ಸುಮಲತಾ ಅವರಿಗೇನು ಹುಚ್ಚು ಇದೆಯಾ: ಡಾ. ಸಿದ್ದರಾಮಯ್ಯ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv