ಮಂಗಳೂರು: ದೀಪಕ್ ಒಳ್ಳೆಯ ಹುಡುಗನಾಗಿದ್ದ. ಆತನನ್ನು ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಅಂಗಡಿ ಮಾಲೀಕ ಮಜೀದ್ ಹೇಳಿದ್ದಾರೆ.
ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ 7 ವರ್ಷಗಳಿಂದ ಆತ ನನ್ನ ಜೊತೆ ಕೆಲಸಕ್ಕೆ ಇದ್ದ. ಅಂಗಡಿಯಲ್ಲಿ ನಮ್ಮ ಭಾಷೆಯಲ್ಲೇ ವ್ಯವಹರಿಸುತ್ತಿದ್ದ. ಎಲ್ಲರ ಜೊತೆ ಸ್ನೇಹ ಮನೋಭಾವ ಹೊಂದಿದ್ದ ಆತನ ಹತ್ಯೆಗೆ ಕಾರಣ ಏನು ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿದರು.
Advertisement
Advertisement
ಯಾರ ಮೇಲೂ ದೀಪಕ್ ದ್ವೇಷ ಹೊಂದಿರಲಿಲ್ಲ. ಆತನ ಸಾವು ನನಗೆ ಊಹಿಸಲೂ ಸಾಧ್ಯ ಇಲ್ಲ. ನಮ್ಮೆಲ್ಲರ ಜೊತೆ ಚೆನ್ನಾಗಿ ವ್ಯವಹರಿಸುತ್ತಿದ್ದ ದೀಪಕ್ ಕೊಂದಿದ್ದು ಯಾಕೆ ಎನ್ನುವುದು ನನಗೆ ಇನ್ನು ತಿಳಿಯುತ್ತಿಲ್ಲ ಎಂದರು. ಇದನ್ನು ಓದಿ: ದೀಪಕ್ ಹತ್ಯೆ ಕೇಸ್: ಪೊಲೀಸರ 27 ಕಿ.ಮೀ ಥ್ರಿಲ್ಲಿಂಗ್ ಚೇಸಿಂಗ್ ಸ್ಟೋರಿ ಓದಿ
Advertisement
ಇದೇ ವೇಳೆ ದೀಪಕ್ ಕುಟುಂಬದ ಆಧಾರ ಸ್ತಂಭವಾಗಿದ್ದ, ಯಾವುದೇ ಸಮಾಜ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಹೇಳಿ ಮಜೀದ್ ಕಣ್ಣೀರಟ್ಟರು. ಇದನ್ನು ಓದಿ: ಕೊಲೆ ಸಂಖ್ಯೆ 21. ಇನ್ನು ಎಷ್ಟು ಕೊಲೆಯಾಗಬೇಕು: ಸಿಎಂಗೆ ಪ್ರತಾಪ್ ಸಿಂಹ ಪ್ರಶ್ನೆ
Advertisement
ದೀಪಕ್ ಅವರು ಅಬ್ದುಲ್ ಮಜೀದ್ ಅವರ ಮೊಬೈಲ್ ಮತ್ತು ಸಿಮ್ ವ್ಯಾಪಾರ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಮಧ್ಯಾಹ್ನ ಮಜೀದ್ ಅವರ ಮನೆಗೆ ಹೋಗಿ ಸಿಮ್ ವಿತರಣೆಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿಕೊಂಡು ಮರಳುತ್ತಿರುವಾಗ ಅವರನ್ನು ಅಡ್ಡಗಟ್ಟಿ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇದನ್ನು ಓದಿ: ಆಗ ಸುಮ್ಮನಿದ್ದವರು ಈಗೇನು ಮಾತನಾಡೋದು: ಬಿಜೆಪಿ ನಾಯಕರ ವಿರುದ್ಧ ಮುತಾಲಿಕ್ ಕಿಡಿ
https://www.youtube.com/watch?v=0iJpHrCbDbc