ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಡೀಲ್ ಪ್ರಕರಣದಲ್ಲಿ ಸಿಲುಕಿದ ಬೆನ್ನಲ್ಲೇ ಅವರಿಗೆ ದೀಪಾವಳಿ ಅಮಾವಾಸ್ಯೆ ಕಂಟಕನಾ? ಎಂಬ ಅಂಶ ಚರ್ಚೆಗೆ ಕಾರಣವಾಗಿದೆ.
ಈ ಹಿಂದೆಯೂ ಕೂಡ ಜನಾರ್ದನ ರೆಡ್ಡಿ ಅವರಿಗೆ ದೀಪಾವಳಿ ಅಮಾವಸ್ಯೆ ವೇಳೆಯೇ ಸಂಕಷ್ಟ ಎದುರಾಗಿತ್ತು. 2011ರಲ್ಲಿ ಜನಾರ್ದನ ರೆಡ್ಡಿ ಅವರನ್ನ ಮೊದಲ ಬಾರಿಗೆ ಬಂಧನ ಮಾಡುವ ವೇಳೆ ದೀಪಾವಳಿ ಅಮಾವಾಸ್ಯೆಗೆ ಕೇವಲ 15 ದಿನ ಮಾತ್ರ ಬಾಕಿ ಉಳಿದಿತ್ತು. 2012ರಲ್ಲಿಯೂ ಕೂಡ ದೀಪಾವಳಿ ಹಬ್ಬದ ಹೊತ್ತಲ್ಲೇ ಜಾಮೀನುಗಾಗಿ ಸಲ್ಲಿಕೆ ಮಾಡಿದ್ದ ವೇಳೆ ಬೇಲ್ ಡೀಲ್ ಆರೋಪದಲ್ಲಿ ಜನಾರ್ದನ ರೆಡ್ಡಿ ಸಿಲುಕಿದ್ದರು.
Advertisement
Advertisement
ಮೈನಿಂಗ್ ಹಗರಣಕ್ಕೆ ಸಂಬಂದಿಸಿದಂತೆ ನವೆಂಬರ್ 20, 2015ರಂದು ಎಸ್‍ಐಟಿ ಅಧಿಕಾರಿಗಳು ರೆಡ್ಡಿ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದರು. ಸದ್ಯ ಆಂಬಿಡೆಂಟ್ ಡೀಲ್ ಪ್ರಕರಣದಲ್ಲೂ ದೀಪಾವಳಿಯ ಅಮಾವಸ್ಯೆ ವೇಳೆಯೇ ಬಂಧನ ಭೀತಿ ಎದುರಿಸುತ್ತಿದ್ದಾರೆ. ಸಿಸಿಬಿ ಪೊಲೀಸರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ವಿಚಾರಣೆಗೆ ಸಿಸಿಬಿ ಕಚೇರಿಗೆ ಆಗಮಿಸಿದ ವೇಳೆಯೇ ಬಂಧಿಸುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಅವರಿಗೆ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರು ಆದರೆ ನ್ಯಾಯಾಲಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews