– ಸ್ಫೋಟಕ ಪಟಾಕಿ ನಿಷೇಧ, ಆನ್ಲೈನ್ನಲ್ಲೂ ಮಾರಾಟ ಇಲ್ಲ
ಬೆಂಗಳೂರು: ದೀಪಾವಳಿ (Deepavali) ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (Karnataka State Pollution Control Board) ಸೂಚನೆ ಮೇರೆಗೆ ಬಿಬಿಎಂಪಿ (BBMP) ಮಾರ್ಗಸೂಚಿ ಪ್ರಕಟಿಸಿದೆ.
Advertisement
ಸ್ಫೋಟಕ ಪಟಾಕಿಗಳನ್ನು ಸಿಡಿಸುವುದು ಸಂಪೂರ್ಣ ನಿಷೇಧಿಸಿದ್ದು, ಹಸಿರು ಪಟಾಕಿ (Green Crackers) ಮಾತ್ರ ಸಿಡಿಸುವಂತೆ ಸಾರ್ವಜನಿಕರಿಗೆ ಮಾಲಿನ್ಯ ಮಂಡಳಿ ಮನವಿ ಮಾಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರ ವರೆಗೆ ಮೂರು ದಿನ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಇದನ್ನೂ ಓದಿ: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ
Advertisement
Advertisement
ಯಾವ ಸಮಯದಲ್ಲಿ ಪಟಾಕಿ ಸಿಡಿಸಬೇಕು?
ಈ ಮೂರು ದಿನಗಳಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆ ಅವಧಿಯಲ್ಲಿ ಮಾತ್ರ ಹಸಿರು ಪಟಾಕಿ ಸಿಡಿಸಬೇಕು. ಅದರ ಹೊರತಾಗಿ ಬೇಕಾಬಿಟ್ಟಿ ಪಟಾಕಿ ಸಿಡಿಸುವುದಕ್ಕೆ ಕೆಎಸ್ಪಿಸಿಬಿ ಸೂಚನೆಯಂತೆ ಪಾಲಿಕೆ ನಿಷೇಧಿಸಿದೆ. ಇದನ್ನೂ ಓದಿ: ನಟ ವಿಜಯ್ ಬಿಜೆಪಿಯ ʻಸಿʼ ಟೀಂ – ತಮಿಳುನಾಡು ಡಿಎಂಕೆ ಸಚಿವ ಟೀಕೆ
Advertisement
ಅನಗತ್ಯವಾಗಿ ಪಟಾಕಿ ಮನೆ ಹಾಗೂ ಇತರೆ ಜಾಗದಲ್ಲಿ ಶೇಖರಣೆ ಮಾಡದಂತೆಯೂ ಸೂಚನೆ ನೀಡಲಾಗಿದೆ. ಆನ್ಲೈನ್ನಲ್ಲೂ ಬೇಕಾಬಿಟ್ಟಿ ಸ್ಫೋಟಕ ಪಟಾಕಿ ಮಾರಾಟ ಮಾಡದಂತೆ ತಾಕೀತು ಮಾಡಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶ ಸಂಖ್ಯೆ ಉಲ್ಲೇಖಿಸಿ ಸಾರ್ವಜನಿಕ ಸುತ್ತೋಲೆ ಹೊರಡಿಸಲಾಗಿದೆ. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್ ಫೋರ್ಸ್ಗೆ ತಂದುಕೊಡಿ – ಎಂ.ಬಿ ಪಾಟೀಲ್
ಕಳೆದ ವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನೂ ಓದಿ: 13 ವರ್ಷ ಪ್ರೀತಿಸಿದ ಹುಡುಗಿ ಮತ್ತೊಬ್ಬನ ಜೊತೆ ಮದುವೆ – ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಆತ್ಮಹತ್ಯೆ