– ಭಕ್ತರಿಗಾಗಿ 2 ಲಕ್ಷಕ್ಕೂ ಹೆಚ್ಚು ಲಾಡು ತಯಾರಿ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Temple) ದೀಪಾವಳಿ ಜಾತ್ರೆ ಹಿನ್ನೆಲೆಯಲ್ಲಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.
ನವೆಂಬರ್ 6 ರಿಂದ 10 ರವರೆಗೂ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ತಮಿಳುನಾಡು ಜನರಿಗೆ ಸಿಎಂ ದೀಪಾವಳಿ ಗಿಫ್ಟ್; 10 ತರಕಾರಿಗಳುಳ್ಳ 2.50 ಕೆಜಿ ಪ್ಯಾಕೆಟ್ 100 ರೂ.ಗೆ ಲಭ್ಯ
ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪಾದಯಾತ್ರೆ ಸೇರಿದಂತೆ ಬಸ್ಸುಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರ ಆಗಮನ ಹಿನ್ನೆಲೆ ಟ್ರಾಫಿಕ್ ಜಾಮ್ ಸಂಭವಿಸದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ.
ಭಕ್ತರಿಗಾಗಿ 2 ಲಕ್ಷಕ್ಕೂ ಹೆಚ್ಚಿನ ಲಾಡು ತಯಾರಿ ಮಾಡಲಾಗಿದೆ. ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಹಿಸಿದೆ. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್; ತುಟ್ಟಿ ಭತ್ಯೆ ಹೆಚ್ಚಳ
