Connect with us

Bollywood

ಅನಾರೋಗ್ಯದಿಂದ ಬಳಲುತ್ತಿರುವ ದೀಪಿಕಾ: ಫೋಟೋ ವೈರಲ್

Published

on

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅನಾರೋಗ್ಯದಿಂದ ಬಳಲುತ್ತಿದ್ದು, ಸ್ವತಃ ಅವರೇ ಈ ವಿಷಯವನ್ನು ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ದೀಪಿಕಾ ತನ್ನ ಪತಿ, ನಟ ರಣ್‍ವೀರ್ ಸಿಂಗ್ ಜೊತೆ ಆತ್ಮೀಯ ಗೆಳತಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೆ ಈ ಕಾರ್ಯಕ್ರಮದ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಕಾರ್ಯಕ್ರಮದಲ್ಲಿ ದೀಪಿಕಾ ಸಾಕಷ್ಟು ಎಂಜಾಯ್ ಮಾಡಿದ್ದು, ಇದೀಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ದೀಪಿಕಾ ತನ್ನ ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಅನಾರೋಗ್ಯದಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಈ ಫೋಟೋಗೆ ಅವರು ಥರ್ಮಾಮೀಟರ್ ಎಮೋಜಿ ಹಾಕಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ದೀಪಿಕಾ ಜ್ವರದಿಂದ ಬಳಲುತ್ತಿದ್ದಾರೆ ಅವರು ಬೇಗ ಗುಣಮುಖರಾಗಲಿ ಎಂದು ಆಶಿಸುತ್ತಿದ್ದಾರೆ.

ಈ ಫೋಟೋ ಪೋಸ್ಟ್ ಮಾಡಿ ದೀಪಿಕಾ ಅದಕ್ಕೆ, “ನೀವು ನಿಮ್ಮ ಆತ್ಮೀಯ ಗೆಳತಿಯ ಮದುವೆಯಲ್ಲಿ ತುಂಬಾನೇ ಎಂಜಾಯ್ ಮಾಡಿದರೆ ಈ ರೀತಿ ಆಗುತ್ತದೆ” ಎಂದು ಬರೆದುಕೊಂಡಿದ್ದಾರೆ. ಸದ್ಯ ದೀಪಿಕಾ ತಮಗೆ ಏನಾಗಿದೆ ಎಂಬುದನ್ನು ಅಧಿಕೃತವಾಗಿ ಹೇಳಲಿಲ್ಲ.

ದೀಪಿಕಾ, ಮೇಘನಾ ಗುಲ್ಝಾರ್ ನಿರ್ದೇಶಿಸುತ್ತಿರುವ ‘ಚಾಪಕ್’ ಚಿತ್ರದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಈ ಚಿತ್ರ ಆ್ಯಸಿಡ್ ದಾಳಿಗೊಳಗಾದ ಲಕ್ಷ್ಮೀ ಅಗರ್ ವಾಲ್ ಜೀವನಚರಿತ್ರೆ ಆಗಿದೆ. ಈ ಚಿತ್ರದ ನಂತರ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್ ಅವರ ಜೊತೆ ’83’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *