ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್ ನ ಪಠಾಣ್ ಸಿನಿಮಾದ ಹಾಡು ಇಂದು ಬಿಡುಗಡೆ ಆಗಿದೆ. ಸಾಂಗ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲೇ ಮಿಲಿಯನ್ ಗಟ್ಟಲೇ ವೀಕ್ಷಣೆಯನ್ನು ಅದು ಪಡೆದುಕೊಂಡಿದೆ. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಹಾಟ್ ಹಾಟ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಸಖತ್ ಸಂಗೀತಕ್ಕೆ ಸೊಂಟ ಬಳುಕಿಸಿದ್ದಾರೆ. ದೀಪಿಕಾ ಕುಣಿತಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
- Advertisement 2
ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ
- Advertisement 3
- Advertisement 4
ಇಂದು ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. ಬಿಡುಗಡೆಯಾದ ಹಾಡಿಗೆ ಅಭಿಮಾನಿಗಳು ಕೂಡ ಜೈಕಾರ ಹಾಕಿದ್ದಾರೆ.
ಇದು ಶಾರುಖ್ ಖಾನ್ ವೃತ್ತಿ ಜೀವನದ ಮಹತ್ವದ ಸಿನಿಮಾ ಎನ್ನಲಾಗುತ್ತಿದ್ದು, ಸತತ ಸೋಲಿನ ಬಳಿಕೆ ಬಾಲಿವುಡ್ ಗೆ ಈ ಸಿನಿಮಾ ಶಕ್ತಿ ತುಂಬಲಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಕಾಂಬಿನೇಷನ್ ಇರುವುದರಿಂದ ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಹಿಟ್ ಆಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಇಂದು ಬಿಡುಗಡೆ ಆಗಿರುವ ಹಾಡು ಅಂಥದ್ದೊಂದು ಭರವಸೆಯನ್ನೂ ಮೂಡಿಸಿದೆ.