ಬೆಂಗಳೂರಿನ ಬೆಡಗಿ ಸದ್ಯ ಬಾಲಿವುಡ್‌ನ ಟಾಪ್ ನಟಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ಬೇಬಿ ಬಂಪ್ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಕಪ್ಪು ಬಣ್ಣದ ಡ್ರೆಸ್‌ನಲ್ಲಿ ಧರಿಸಿ ನಗು ನಗುತ್ತಾ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬೇಬಿ ಬಂಪ್ ಲುಕ್ ಶೇರ್ ಮಾಡಿ ಸಾಕು, ನನಗೆ ಹಸಿವಾಗುತ್ತಿದೆ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ನಟಿಯ ಪೋಸ್ಟ್ಗೆ ಇದೀಗ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.
‘ಕಲ್ಕಿ 2898 ಎಡಿ’ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಹಾಜರಾಗಲು ನಟಿ ರೆಡಿಯಾಗಿರುವ ಫೋಟೋವನ್ನು ಶೇರ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಸೂರ್ಯ ಜೊತೆ ನಟಿಸಲು 4 ಕೋಟಿ ಸಂಭಾವನೆ ಪಡೆದ ಪೂಜಾ ಹೆಗ್ಡೆ
ಅಂದಹಾಗೆ, ಹಲವು ವರ್ಷಗಳ ಡೇಟಿಂಗ್ ನಂತರ 2018ರ ನವೆಂಬರ್‌ನಲ್ಲಿ ರಣವೀರ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ 6 ವರ್ಷಗಳ ನಂತರ ಮೊದಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ.