‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

Public TV
1 Min Read
deepika padukone 4

ವಿಶ್ವದ ಪ್ರತಿಷ್ಠಿತ ಪ್ರಶಸ್ತಿ ಆಸ್ಕರ್ ಗೆ (Oscar) ದಿನಗಣನೆ ಶುರುವಾಗಿದೆ. ಹಲವಾರು ಕಾರಣಗಳಿಂದಾಗಿ ಈ ಬಾರಿ ಆಸ್ಕರ್ ವೇದಿಕೆ ಕಲರ್ ಫುಲ್ ಆಗಿರುತ್ತದೆ. ಭಾರತದ ಹೆಸರಾಂತ ನಟರಾದ ರಾಮ್ ಚರಣ್ (Ram Charan) ಮತ್ತು ಜ್ಯೂನಿಯರ್ ಎನ್.ಟಿ.ಆರ್ (Jr.NTR) ‘ನಾಟು ನಾಟು’ ಹಾಡಿಗೆ ವೇದಿಕೆಯ ಮೇಲೆ ಹೆಜ್ಜೆ ಹಾಕುತ್ತಿದ್ದರೆ, ಈ ಬಾರಿಯ ಆಸ್ಕರ್ ಕಾರ್ಯಕ್ರಮದ ನಿರೂಪಣೆಯ ಹೊಣೆಯನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಹೊರಲಿದ್ದಾರೆ.

deepika

ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮೌನ ಮುರಿದ ಕನ್ನಡದ `ಗಿಲ್ಲಿ’ ನಟಿ ರಾಕುಲ್

deepika padukone 3

ಇದೇ ಮಾರ್ಚ್ 12ರಂದು (ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13) ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

deepika padukone 1

ಈ ಬಾರಿ ಆಸ್ಕರ್ ವೇದಿಕೆಯ ಮೇಲೆ ನಿರಂತರವಾಗಿ ದೀಪಿಕಾ ಕಾಣಿಸಿಕೊಂಡರೆ, ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಲೈವ್ ಆಗಿ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲದೇ, ಅದೇ ವೇದಿಕೆಯಲ್ಲೇ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲಾ ಭೈರವ ಹಾಡಲಿದ್ದಾರೆ. ಭಾರತದಿಂದ ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಕೂಡ ಪ್ರಶಸ್ತಿಯ ರೇಸ್ ನಲ್ಲಿದೆ.

Share This Article
Leave a Comment

Leave a Reply

Your email address will not be published. Required fields are marked *