ತಮಿಳು (Tamil) ಚಿತ್ರೋದ್ಯಮದಿಂದ ಅಚ್ಚರಿ ಪಡುವಂತಹ ಸುದ್ದಿಯೊಂದು ಬಂದಿದೆ. ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಿಂಬು (Simbu) ಜೋಡಿಯಾಗಿ ಅವರು ನಟಿಸುತ್ತಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ, ತಮಿಳಿನ ಖ್ಯಾತ ನಟ ಕಮಲ್ ಹಾಸನ್ (Kamal Haasan) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಮಲ್ ಪ್ರೊಡಕ್ಷನ್ ಹೌಸ್ ಈ ಚಿತ್ರವನ್ನು ನಾಡಿಗೆ ಅರ್ಪಿಸುತ್ತಿದೆ. ಇದೇ ಮೊದಲ ಬಾರಿಗೆ ದೀಪಿಕಾ ಪಡುಕೋಣೆ ಮತ್ತು ಸಿಂಬು ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದು, ಈ ಜೋಡಿ ಸಖತ್ ಮೋಡಿ ಮಾಡಲಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
ಮತ್ತೊಂದು ಮೂಲಗಳ ಪ್ರಕಾರ ಸಿಂಬುಗಿಂತಲೂ ದೀಪಿಕಾ ಪಡುಕೋಣೆಗೆ ಹೆಚ್ಚು ಸಂಭಾವನೆ ನೀಡಲಾಗಿದೆಯಂತೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ ಅತೀ ಹೆಚ್ಚು ಸಂಭಾವನೆಯನ್ನು ಅವರು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಚಿತ್ರತಂಡವಾಗಲಿ ಅಥವಾ ದೀಪಿಕಾವಾಗಲಿ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದನ್ನೂ ಓದಿ:ಮಗಳ ಭವಿಷ್ಯಕ್ಕಾಗಿ ದೇಶ ಬಿಡಲು ಸಿದ್ಧ ಎಂದ ಪ್ರಿಯಾಂಕಾ ಚೋಪ್ರಾ
ಸದ್ಯ ದೀಪಿಕಾ ಪಡುಕೋಣೆ ಪ್ರಾಜೆಕ್ಟ್ ಕೆ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಈ ಸಿನಿಮಾದಲ್ಲಿ ಪ್ರಭಾಸ್ (Prabhas) ಜೊತೆ ದೀಪಿಕಾ ನಟಿಸುತ್ತಿದ್ದಾರೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದ್ಧೂರಿಯಾಗಿ ತಯಾರಾಗುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ದೀಪಿಕಾ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ.