ಕಾಫಿ ತೋಟದಲ್ಲಿ ಕಡವೆ ಬೇಟೆ – ಆರೋಪಿಗಳು ಪರಾರಿ

Public TV
1 Min Read
Deer

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕಡವೆ ಬೇಟೆಯಾಡಿ ಪಿಕಪ್ ವಾಹನಕ್ಕೆ ತಂಬುತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ಮಾಡುವ ಮಾಹಿತಿ ಸಿಕ್ಕಿ ಆರೋಪಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹೊಸೂರು ಸಮೀಪದ ನಡೆದಿದೆ.

forest department

ಈ ಸಂಬಂಧ ಪ್ರಶಾಂತ್, ದಿನೇಶ್, ಪೂರ್ಣೇಶ್, ಸುಗಂದ್ ಹಾಗೂ ಸುರೇಶ್ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ತಾಲೂಕಿನ ನುಗ್ಗಿ ಗ್ರಾಪ ಪಂಚಾಯತ್ ವ್ಯಾಪ್ತಿಯ ಹೊಸೂರು ಎಂಬ ಗ್ರಾಮದ ಕಾಫಿ ತೋಟವೊಂದರಲ್ಲಿ ಆರೋಪಿಗಳು ಅಕ್ರಮವಾಗಿ ಕಡವೆ ಬೇಟೆಯಾಡಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಆದರೆ, ಈ ವೇಳೆ ಅರಣ್ಯ ಅಧಿಕಾರಿಗಳು ಬರುವ ಮಾಹಿತಿ ಸಿಕ್ಕ ಹಿನ್ನೆಲೆ ಬೇಟೆಗಾರರು ಕಡವೆಯನ್ನು ಅಲ್ಲೇ ಬಿಟ್ಟು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಶಾಲೆಗೆ ತೆರಳಲು ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

forest department 1

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದಾಗ ಸ್ಥಳದಲ್ಲಿ ಯಾರೂ ಇರಲಿಲ್ಲ. ಬಳಿಕ ಅರಣ್ಯ ಅಧಿಕಾರಿಗಳು ಕಾದು ಕುಳಿತಿದ್ದರು. ಸ್ವಲ್ಪ ಹೊತ್ತಿನ ನಂತರ ಆರೋಪಿಗಳು ಮಾಂಸವನ್ನು ಪಿಕಪ್ ವಾಹನಕ್ಕೆ ತುಂಬುತ್ತಿದ್ದಾಗ ದಾಳಿ ಮಾಡಿದ್ದಾರೆ. ಈ ವೇಳೆ ಪಿಕಪ್ ವಾಹನವನ್ನು ಅಲ್ಲೇ ಬಿಟ್ಟು ಆರೋಪಿಗಳು ನಾಪತ್ತೆಯಾಗಿದ್ದಾರೆ. ಅಧಿಕಾರಿಗಳು ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಧಿಕಾರಿಗಳು ಆರೋಪಿಗಳ ಮನೆ ಮೇಲೂ ದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ಪತ್ತೆಯಾಗಿಲ್ಲ. ಈ ಕಾರ್ಯಾಚರಣೆಯಲ್ಲಿ ಕೊಪ್ಪ ಡಿ.ಎಫ್.ಓ ನೀಲೇಶ್ ಶಿಂಧೆ ಮಾರ್ಗದರ್ಶನದಲ್ಲಿ ಆರ್.ಎಫ್.ಓ ಪ್ರವೀಣ್, ರಘು, ಪ್ರಕಾಶ್, ಕಿರಣ್, ದಿವಾಕರ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ನಿನ್ನ ವಾಹನದಿಂದ ಬೆಳೆ ಉಳಿಸು- ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ

Share This Article
Leave a Comment

Leave a Reply

Your email address will not be published. Required fields are marked *