ಮೈಸೂರು: ಅರಣ್ಯ ಇಲಾಖೆ (Forest Department) ವಶದಲ್ಲಿದ್ದ ಜಿಂಕೆ (Deer) ಮಾಂಸ ಮಾರಾಟ ಆರೋಪಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಎಚ್.ಡಿ. ಕೋಟೆಯಲ್ಲಿ ನಡೆದಿದೆ.
ತಾಲೂಕಿನ ಹೊಸಹಳ್ಳಿ ಹಾಡಿಯ ಕರಿಯಪ್ಪ ಮೃತ ದುರ್ದೈವಿ. ಮೂರು ದಿನಗಳ ಹಿಂದೆ ಜಿಂಕೆ ಮಾಂಸ ಮಾರಾಟ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದರು. ಬಸಪುರದ ಪ್ರಸಾದ್, ಮುನಿಯಪ್ಪನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕು ದಿನಗಳ ಮಹಾಕುಂಭ ಮೇಳ
ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಕರಿಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ವಿಚಾರಣೆ ಮಾಡುವ ವೇಳೆ ಕರಿಯಪ್ಪ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಆದರೆ, ಇದು ಕೊಲೆ ಎಂದು ಆರೋಪಿ ಕರಿಯಪ್ಪ ಪೋಷಕರು ಆರೋಪಿದ್ದಾರೆ. ವಿಚಾರಣೆ ನೆಪದಲ್ಲಿ ಗುಂಡ್ರೆ ಅರಣ್ಯ ವಲಯದ ಅರಣ್ಯ ಸಿಬ್ಬಂದಿ ಕರಿಯಪ್ಪನನ್ನು ಹೊಡೆದು ಸಾಯಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: 2 ಗಂಟೆ ಆತ್ಮಹತ್ಯೆ ಹೈಡ್ರಾಮಾ – ಸಿನಿಮಾ ರೀತಿಯಲ್ಲಿ ದಂಪತಿಯ ರಕ್ಷಣೆ