ಬೆಂಗಳೂರು: ತಮ್ಮ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಮಾನಹಾನಿ ಕೇಸ್ ರದ್ದುಗೊಳಿಸುವಂತೆ ಕೋರಿದ್ದ ಡಿ. ರೂಪಾ ಮೌದ್ಗಿಲ್ (Roopa Moudgil) ಅವರ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.
ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ಸೋಮವಾರ (ಆ.21) ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ ಪ್ರಕರಣ ರದ್ದು ಕೋರಿದ್ದ ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ನಲ್ಲಿ ರೂಪಾ ಮೌದ್ಗಿಲ್ ಗೆ ಹಿನ್ನಡೆ ಉಂಟಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ ಮಾಡಿದೆ.
ಪ್ರಕರಣದ ಹಿನ್ನೆಲೆ ಏನು?
ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ (Rohini Sindhuri) ಅವರು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕೋರ್ಟ್ ರೂಪಾ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು, ಆ ನಂತರ ಕೋರ್ಟ್‌ಗೆ ಹಾಜರಾಗಿ ರೂಪಾ ಜಾಮೀನು ಪಡೆದಿದ್ದರು. ಇದನ್ನೂ ಓದಿ: ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ
ಏನಿದು ವಿವಾದ?
ಸೋಷಿಯಲ್ ಮೀಡಿಯಾ ಮತ್ತು ಮಾಧ್ಯಮಗಳ ಮೂಲಕ ಐಎಎಸ್ ಅಧಿಕಾರಿ (IAS Officer) ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಬಹಿರಂಗವಾಗಿ ಕಿತ್ತಾಟಕ್ಕೆ ಇಳಿದಿದ್ದರು. ರೋಹಿಣಿ ವಿರುದ್ಧ ರೂಪಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪ ಮಾಡಿದ್ದರು. ಬಳಿಕ ಇಬ್ಬರ ನಡುವೆ ಕಿತ್ತಾಟ ಜೋರಾಗಿತ್ತು. ಮುನೀಶ್ ಮೌದ್ಗಿಲ್ ಹೆಸರನ್ನೂ ರೂಪಾ ಆರೋಪಗಳಲ್ಲಿ ಉಲ್ಲೇಖಿಸಿದ್ದರು. ಅಧಿಕಾರಿಗಳು ಹೀಗೆ ಬಹಿರಂಗವಾಗಿ ಕಿತ್ತಾಡಬಾರದು ಎಂದು ಹಿರಿಯ ಅಧಿಕಾರಿಗಳು, ಸಚಿವರು ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಇಬ್ಬರಿಗೂ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ಡಿ.ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರೋಹಿಣಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]