ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲೇ ಐಸೊಲೇಟ್ ಆಗಿದ್ದಾರೆ.
ನನಗೆ ಸೌಮ್ಯ ರೋಗಲಕ್ಷಣ ಇತ್ತು. ಪರೀಕ್ಷೆಗೆ ಒಳಗಾದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿದ್ದವರು ಐಸೊಲೇಟ್ ಆಗಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: 1000ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್
I have tested positive for Corona today with mild symptoms. I am under home quarantine. I request everyone who have recently come in my contact to isolate themselves and get tested.
— Rajnath Singh (@rajnathsingh) January 10, 2022
ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೆಚ್ಚುತ್ತಿದ್ದು, ಶೇ.23 ಆಗಿದೆ. ಕಳೆದ 24 ಗಂಟೆಗಳಲ್ಲಿ 22,751 ಪ್ರಕರಣಗಳು ದೆಹಲಿಯಲ್ಲಿ ವರದಿಯಾಗಿವೆ.
ದೇಶದಲ್ಲಿ ಒಂದೇ ದಿನದಲ್ಲಿ 1.79 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಇದನ್ನೂ ಓದಿ: ನಟಿ, ಭರತನಾಟ್ಯ ಕಲಾವಿದೆ ಶೋಬನಾಗೆ ಓಮಿಕ್ರಾನ್ ಪಾಸಿಟಿವ್