ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

Public TV
1 Min Read
DRDO Scientist

ಮುಂಬೈ: ಪಾಕಿಸ್ತಾನಿ (Pakistan) ಏಜೆಂಟ್‍ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation) ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬನನ್ನು (Scientist) ಮಹಾರಾಷ್ಟ್ರ (Maharastra) ಭಯೋತ್ಪಾದನಾ ನಿಗ್ರಹ ದಳ (Anti Terrorism Squad) ಬಂಧಿಸಿದೆ.

crime

ಉನ್ನತ ಹುದ್ದೆಯಲ್ಲಿದ್ದ ಆರೋಪಿಯು ವಾಟ್ಸಾಪ್ (WhatsApp) ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ( Honey Trap) ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆ – ಕರ್ನಾಟಕದಲ್ಲಿ ಅಮಿತ್ ಶಾ ಕಾರ್ಯಕ್ರಮಗಳು ರದ್ದು

ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಯ ವಿರುದ್ಧ ಮುಂಬೈನ (Mumbai) ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ (Official Secrets Act) ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೀಟ್ ಅಭ್ಯರ್ಥಿಗಳಿಗೆ ಸಂಚಾರದ ಆತಂಕ – ಬೆಂಗಳೂರಲ್ಲಿ ಮೋದಿ ರೋಡ್ ಶೋನಲ್ಲಿ ಮತ್ತೆ ಬದಲಾವಣೆ

Share This Article