ಬಾಗಲಕೋಟೆ: ಪದವಿ ಕಾಲೇಜು ಆವರಣದಲ್ಲೇ ನೇಣು ಹಾಕಿಕೊಂಡು ಪ್ರಿನ್ಸಿಪಾಲ್ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ (Hungund City) ನಡೆದಿದೆ.
ಹುನಗುಂದ ಸರ್ಕಾರಿ ಪದವಿ ಕಾಲೇಜಿನ ಪ್ರಿನ್ಸಿಪಾಲ್ (Principal) ಆಗಿರುವ ನಾಗರಾಜ್ ಮುದಗಲ್ (57) ನೇಣಿಗೆ ಶರಣಾಗಿರುವ ದುರ್ದೈವಿ. ಇಂದು ಬೆಳಗಿನ ಜಾವ ಕಾಲೇಜ್ ಆವರಣದಲ್ಲಿಯ ಕ್ಯಾಂಟೀನ್ ಸ್ಟೇರ್ ಕೇಸ್ ಗ್ರಿಲ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಆಫೀಸ್‌ಗೆ ಬರದೇ ಹೋದ್ರೆ ಕೆಲ್ಸದಿಂದ ವಜಾ – ಉದ್ಯೋಗಿಗಳಿಗೆ ಖಡಕ್ ವಾರ್ನಿಗ್ ಕೊಟ್ಟ ಮೆಟಾ
ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ನಾಗರಾಜ್ ಮುದಗಲ್ (Nagaraj Mudugal) ಶವವನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಿನ್ಸಿಪಾಲ್ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಏನಾದರೂ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಇದೆ.
ಮಂಗಳವಾರ ಸರ್ಕಾರಿ ಪದವಿ ಕಾಲೇಜ್‌ನಲ್ಲಿ “ಜನಪದ ಜಾತ್ರೆ ಹೊನ್ನ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೀಗಾಗಿ ಸೋಮವಾರ ರಾತ್ರಿಯವರೆಗೆ ಕಾರ್ಯಕ್ರಮಕ್ಕಾಗಿ ಗಣ್ಯರಿಗೆಲ್ಲ ಆಮಂತ್ರಣ ನೀಡಿ ಬಂದಿದ್ದ ಪ್ರಿನ್ಸಿಪಾಲ್ ಇಂದು ಬೆಳಿಗ್ಗೆ ಮನೆಗೆ ಹೋಗಿ ಕಾಲೇಜಿಗೆ ಬಂದು ನೇಣು ಹಾಕಿಕೊಂಡಿದ್ದಾರೆಂಬ ಮಾಹಿತಿ ಇದೆ.
ಮೃತ ಪ್ರಿನ್ಸಿಪಾಲ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಪ್ರಿನ್ಸಿಪಾಲ್‌ಗೆ ಪತ್ನಿ, ಮೂವರು ಮಕ್ಕಳಿದ್ದಾರೆ. 14 ವರ್ಷಗಳಿಂದ ಇಳಕಲ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದ ನಾಗರಾಜ್ ಆರು ತಿಂಗಳ ಹಿಂದೆಯಷ್ಟೇ ಹುನಗುಂದ ಸರ್ಕಾರಿ ಪದವಿ ಕಾಲೇಜಿಗೆ ವರ್ಗಾವಣೆಯಾಗಿದ್ದರು.
Web Stories