ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೂರಲು ಜಾಗವಿಲ್ಲದೇ ಶಾಮಿಯಾನ ಖುರ್ಚಿ ಬಾಡಿಗೆಗೆ ತಂದು ಪರೀಕ್ಷೆ ಬರೆಸಲಾಗಿದೆ.
ಹರಪ್ಪನಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ವಿದ್ಯಾರ್ಥಿಗಳು ಶಾಮಿಯಾನದಡಿ ಪರೀಕ್ಷೆ ಬರೆಯುತ್ತಿದ್ದಾರೆ. ಕಾಲೇಜಿನಲ್ಲಿ ಎಲ್ಲಾ ವಿಭಾಗ ಸೇರಿ 1,394 ವಿದ್ಯಾರ್ಥಿಗಳಿದ್ದಾರೆ. ಆದರೆ ಕಾಲೇಜಿನಲ್ಲಿ ಕೇವಲ ಏಳು ಕೊಠಡಿಗಳಿವೆ. ಇದರಿಂದಾಗಿ ಪರೀಕ್ಷೆ ಬರೆಯಲು ಜಾಗವಿಲ್ಲದಂತಾಗಿದೆ. ಇದನ್ನು ಮನಗಂಡ ಉಪನ್ಯಾಸಕರು ಪ್ರತಿನಿತ್ಯ ಊಟದ ಟೇಬಲ್, ಚೇರ್, ಶಾಮಿಯಾನಕ್ಕೆ 7,660 ರೂಪಾಯಿ ಬಾಡಿಗೆ ಕೊಟ್ಟು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸುತ್ತಿದ್ದಾರೆ.
Advertisement
Advertisement
ವಿದ್ಯಾರ್ಥಿಗಳು ಇಷ್ಟೆಲ್ಲಾ ಕಷ್ಟ ಪಡುತ್ತಿದ್ದರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಎಷ್ಟೇ ಸಾರಿ ಕಾಲೇಜಿನ ಪರಿಸ್ಥಿತಿ ಕುರಿತು ತಿಳಿಸಿದರು ನಮಗೆ ಸ್ಪಂದಿಸುತ್ತಿಲ್ಲ ಎಂದು ಕಾಲೇಜಿನ ಉಪನ್ಯಾಸಕರು ಆರೋಪಿಸಿದ್ದಾರೆ.
Advertisement
Advertisement
ಈ ಮಧ್ಯೆ ವಿದ್ಯಾರ್ಥಿಗಳು ಮಾತ್ರ ಶಾಮಿಯಾನದಡಿ ಕುಳಿತು ಮಳೆ ಬಂದ್ರೆ ಏನು ಗತಿ ಎನ್ನುವ ಭಯದಲ್ಲಿ ಪ್ರತಿನಿತ್ಯ ಪರೀಕ್ಷೆ ಬರೆಯುವಂತಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv