ಡೆಹ್ರಾಡೂನ್: ಶಸ್ತ್ರ ಚಿಕಿತ್ಸೆಗೂ ಮುನ್ನ ರಕ್ತದ ಅನಿವಾರ್ಯವಿದ್ದ ರೋಗಿಗೆ ಡೆಹ್ರಾಡೂನ್‍ನ (Dehradun) ಡೂನ್ ಪಿಜಿ ವೈದ್ಯಕೀಯ ಕಾಲೇಜಿನ (Doon PG Medical College) ಮೂಳೆ ಶಸ್ತ್ರಚಿಕಿತ್ಸಕ (Orthopedic surgeon) ವೈದ್ಯರೊಬ್ಬರು ತಮ್ಮ ರಕ್ತವನ್ನೇ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಗುಂಡಿಯೊಂದಕ್ಕೆ ಬಿದ್ದು, ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಡೆಹ್ರಾಡೂನ್‍ನ ಡೂನ್ ಪಿಜಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಎದೆ, ಎಡಗೈ ಮತ್ತು ತೊಡೆಯ ಮೂಳೆ ಮುರಿದುಕೊಂಡು ರೋಗಿ ನೋವಿನಿಮದ ನರಳುತ್ತಿದ್ದರು. ಹೀಗಾಗಿ ವ್ಯಕ್ತಿಯನ್ನು ಮೂರು ದಿನಗಳ ಕಾಲ ಐಸಿಯುನಲ್ಲಿ ಇರಿಸಿದ ವೈದ್ಯರು ನಂತರ ಅವರಿಗೆ ತೊಡೆಯ ಮೂಳೆ ಶಸ್ತ್ರ ಚಿಕಿತ್ಸೆ ಮಾಡಲು ನಿರ್ಧರಿಸಿದರು. ಆದರೆ ರೋಗಿಗೆ ರಕ್ತದ ಕೊರತೆ ಇದ್ದಿದ್ದರಿಂದ ಆಪರೇಷನ್ ಮಾಡಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಬೇರೆಯವಳು ಕಾಲ್ ಪಿಕ್ ಮಾಡಿದ್ದಕ್ಕೆ ಬಾಯ್‍ಫ್ರೆಂಡ್ ಮನೆಗೆ ಬೆಂಕಿ ಇಟ್ಲು
Advertisement
Advertisement
ನಂತರ ರಕ್ತ ನೀಡಲು ರೋಗಿಯ ಮಗಳು ಮುಂದಾದರು. ಆದರೆ ಕೆಲವು ಆರೋಗ್ಯ ಸಮಸ್ಯೆಗಳಿದ್ದಿದ್ದರಿಂದ ಆಕೆಯಿಂದ ರಕ್ತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆಗ ಅದೇ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಶಶಾಂಕ್ ಸಿಂಗ್ ತಮ್ಮ ರಕ್ತವನ್ನು ರೋಗಿಗೆ ದಾನ ಮಾಡಲು ನಿರ್ಧರಿಸಿದರು. ಇದರ ಬೆನ್ನಲ್ಲೇ ಆಪರೇಷನ್ ಮಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ಇದನ್ನೂ ಓದಿ: ಸುರೇಶ್ ಗೌಡ ಕೊಲೆಗೆ ಸುಪಾರಿ ಆರೋಪ- 5 ಕೋಟಿ ಡೀಲ್ ನಡೆದಿದೆ ಎಂದ ಮಾಜಿ ಶಾಸಕ