ನವದೆಹಲಿ: ಮಹದಾಯಿ ಕುಡಿಯುವ ನೀರಿನ ಯೋಜನೆಗೆ (Mahadayi Project) ಅನುಮತಿ ನೀಡುವ ಸಂಬಂಧ ಕೇಂದ್ರ ಸರ್ಕಾರದ (Central Government) ಮುಂದೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಕುಡಿಯುವ ನೀರಿನ ಯೋಜನೆಗೆ ಗೋವಾ (Goa) ಅನಗತ್ಯ ಖ್ಯಾತೆ ತೆಗೆದಿದೆ. ಯೋಜನೆ ಜಾರಿಗೆ ನ್ಯಾಯಾಲಯವೇ ತಡೆಯಾಜ್ಞೆ ನೀಡಿಲ್ಲ. ಕೇಂದ್ರ ಸರ್ಕಾರ ಅನುಮತಿ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದೆ.
Advertisement
ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಸುಪ್ರೀಂ ಕೋರ್ಟ್ ಹಾಗೂ ಜಲ ಆಯೋಗದ ಅನುಮತಿ ನಡುವೆಯೂ ಪರಿಸರ ಇಲಾಖೆ ಅನುಮತಿ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
Advertisement
ಸಭೆಯಲ್ಲಿ ಮಾತನಾಡಿದ ಅವರು, ಮಹದಾಯಿ ಉತ್ತರ ಕರ್ನಾಟಕದ ಜನರಿಗೆ ಕುಡಿಯುವ ನೀರಿನ ಯೋಜನೆಯಾಗಿದೆ. ಯೋಜನೆಗೆ ಅನುಮತಿ ನೀಡಬಹುದು ಎಂದು ಹುಲಿ ಸಂರಕ್ಷಣಾ ಪ್ರಾಧಿಕಾರ ಹೇಳಿ 9 ತಿಂಗಳು ಕಳೆದಿದೆ. 2018 ರಲ್ಲೆ ಮಹದಾಯಿ ನ್ಯಾಯಮಂಡಳಿ ನೀರು ಹಂಚಿಕೆ ಮಾಡಿದೆ. ಯೋಜನೆಗೆ ಒಪ್ಪಿಗೆ ನೀಡಬಹುದು ಎಂದು 2020ರಲ್ಲೇ ಸುಪ್ರೀಂ ಕೋರ್ಟ್ ಹೇಳಿದೆ. 2022 ರಲ್ಲಿ ಜಲ ಆಯೋಗ ಯೋಜನೆಯ ಡಿಪಿಆರ್‌ಗೆ ಅನುಮತಿ ನೀಡಿದೆ ಎಂದಿದ್ದಾರೆ.
Advertisement
ಯೋಜನೆಗೆ ಅನುಮೋದನೆ ನೀಡಲು ಯಾವುದೇ ಸಮಸ್ಯೆಗಳಿಲ್ಲ, ಗೋವಾ ಆಕ್ಷೇಪ ಕಂಡು ಯೋಜನೆಗೆ ಅರಣ್ಯ ಪರಿಸರ ಇಲಾಖೆ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ. ಮತ್ತೊಂದು ಕಡೆ ಗೋವಾ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿಯಲ್ಲಿ ನಮ್ಮ ಅನುಮತಿ ಇಲ್ಲದೇ ಯೋಜನೆ ಆರಂಭಿಸುವಂತ್ತಿಲ್ಲ ಎಂದು ಷೋಕಾಸ್ ನೋಟಿಸ್ ನೀಡಿದ್ದಾರೆ. ಹಾಗೇ ನೋಟಿಸ್ ನೀಡಲು ಗೋವಾಕ್ಕೆ ಅಧಿಕಾರವೇ ಇಲ್ಲ. ಗೋವಾ ಆಕ್ಷೇಪ ಬದಿಗಿಟ್ಟು ಕುಡಿಯುವ ನೀರಿನ ಯೋಜನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಕೇಂದ್ರದ ಮುಂದೆ ಪ್ರಬಲ ಆಕ್ಷೇಪ ಮಂಡಿಸಿದ ಬಳಿಕ ಕರ್ನಾಟಕದಿಂದ ಅಗತ್ಯ ದಾಖಲೆಗಳನ್ನು ಪಡೆದುಕೊಂಡಿರುವ ಸಚಿವ ಭೂಪೇಂದ್ರ ಯಾದವ್ (Bhupender Yadav), ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.