ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸೋಮವಾರ ಶಿಕ್ಷಕರ ನೇಮಕಾತಿ ವಿಳಂಬವನ್ನು ವಿರೋಧಿಸಿ ನೂರಾರು ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದು, ಅವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರನೊಬ್ಬ ನೆಲದ ಮೇಲೆ ಮಲಗಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟಿಸುತ್ತಿದ್ದಾಗ ಅಧಿಕಾರಿಗಳು ಅವನನ್ನು ಥಳಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಪಾಟ್ನಾದ ದಕ್ ಬಾಂಗ್ಲಾ ಚೌರಾದಲ್ಲಿ ಪ್ರತಿಭಟನೆ ನಡೆದಿದ್ದು ವೀಡಿಯೊದಲ್ಲಿ, ಪಾಟ್ನಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೆ.ಕೆ ಸಿಂಗ್, ನೆಲದ ಮೇಲೆ ಮಲಗಿ ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದಿದ್ದ ವ್ಯಕ್ತಿಯನ್ನು ಥಳಿಸಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಬಳಿಕ ಧ್ವಜವನ್ನು ವ್ಯಕ್ತಿಯ ಕೈಯಿಂದ ಪೊಲೀಸರು ಕಿತ್ತುಕೊಂಡಿದ್ದಾರೆ.
Advertisement
Advertisement
ಸಿಟಿಇಟಿ, ಬಿಟಿಇಟಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಾಥಮಿಕ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿಗಳನ್ನು ಬಳಸಲಾಯಿತು. ಇದನ್ನೂ ಓದಿ: ನಾನು ಪ್ರಧಾನಿಯಾಗಲು ಬಯಸುವುದಿಲ್ಲ: ಅರವಿಂದ್ ಕೇಜ್ರಿವಾಲ್
Advertisement
ನಾವು ನೇಮಕಾತಿಗಾಗಿ 2019ರಿಂದ ಕಾಯುತ್ತಿದ್ದೇವೆ. ಕಳೆದ 3 ವರ್ಷಗಳಿಂದ ಸರ್ಕಾರ ಕೇವಲ ಭರವಸೆಯನ್ನು ಮಾತ್ರ ನೀಡುತ್ತಿದೆ. ಸರ್ಕಾರ ರಚನೆಗೂ ಮುನ್ನ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮೊದಲ ಸಂಪುಟದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದರು. ಆದರೆ ಇಲ್ಲಿಯವರೆಗೂ ಏನೂ ಆಗಿಲ್ಲ ಎಂದು ಪ್ರತಿಭಟನಾಕಾರರು ಕಿಡಿ ಕಾರಿದ್ದಾರೆ.
Advertisement
Lathi charge was done to control students taking out a protest march in Patna wherein the ADM was thrashing a STET candidate. Enquiry committee made; strict actions will be taken against him, if found guilty:Bihar Dy CM
(Pic:1 Screengrab of video where ADM was beating a student) pic.twitter.com/DGWyofKQAR
— ANI (@ANI) August 22, 2022
ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದ ಶಿಕ್ಷಕ ಅಭ್ಯರ್ಥಿಯನ್ನು ಅಮಾನವೀಯವಾಗಿ ಥಳಿಸಲಾಗಿದೆ. ಬಿಹಾರ ಸರ್ಕಾರ ಹಾಗೂ ಅಧಿಕಾರಿಗಳು ಆತನ ಮುಖದಲ್ಲಿ ರಕ್ತ ಬರುವಂತೆ ಮಾಡಿದ್ದಲ್ಲದೇ ತ್ರಿವರ್ಣ ಧ್ವಜಕ್ಕೂ ಅವಮಾನ ಮಾಡಿದ್ದಾರೆ. ಇದು ಜೆಡಿಯು-ಆರ್‌ಜೆಡಿ ಸರ್ಕಾರದ ಅಸಲಿ ಮುಖ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮನೀಶ್ ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು: ಅರವಿಂದ್ ಕೇಜ್ರಿವಾಲ್
ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರಲು ಲಾಠಿಚಾರ್ಜ್ ಮಾಡಲಾಗಿತ್ತು. ಈ ವೇಳೆ ಎಸ್‌ಟಿಇಟಿ ಅಭ್ಯರ್ಥಿಯನ್ನು ಎಡಿಎಂ ಥಳಿಸಿರುವುದು ತಿಳಿದುಬಂದಿದೆ. ಈ ಘಟನೆ ಬಗ್ಗೆ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಅವರು ತಪ್ಪಿತಸ್ಥರು ಎಂಬುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ.