Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಷರಧಾಮದಂತೆ ಬೆಂಗಳೂರಿನಲ್ಲಿ 25 ಎಕ್ರೆ ಜಾಗದಲ್ಲಿ ಶರಣ ದರ್ಶನ ನಿರ್ಮಿಸಿ – ಸಿಎಂಗೆ ಸ್ವಾಮೀಜಿಗಳ ಬೇಡಿಕೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಕ್ಷರಧಾಮದಂತೆ ಬೆಂಗಳೂರಿನಲ್ಲಿ 25 ಎಕ್ರೆ ಜಾಗದಲ್ಲಿ ಶರಣ ದರ್ಶನ ನಿರ್ಮಿಸಿ – ಸಿಎಂಗೆ ಸ್ವಾಮೀಜಿಗಳ ಬೇಡಿಕೆ ಏನು?

Bengaluru City

ಅಕ್ಷರಧಾಮದಂತೆ ಬೆಂಗಳೂರಿನಲ್ಲಿ 25 ಎಕ್ರೆ ಜಾಗದಲ್ಲಿ ಶರಣ ದರ್ಶನ ನಿರ್ಮಿಸಿ – ಸಿಎಂಗೆ ಸ್ವಾಮೀಜಿಗಳ ಬೇಡಿಕೆ ಏನು?

Public TV
Last updated: February 24, 2025 4:03 pm
Public TV
Share
2 Min Read
Siddaramaiah SWAMIJI 3
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಮಠಾಧೀಶರ ನಿಯೋಗ ಕಾವೇರಿ ‌ನಿವಾಸದಲ್ಲಿ ಭೇಟಿಯಾಗಿ ಹಲವು ಬೇಡಿಕೆ ಇಟ್ಟಿದ್ದಾರೆ‌. ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್ ನಲ್ಲಿ ರೂ 100 ಕೋಟಿ ರೂ. ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್‌ನಲ್ಲಿ ತಲಾ 100 ಕೋಟಿ ರೂ. ನಂತೆ ಒಟ್ಟು 500 ಕೋಟಿ ರೂ. ಅನುದಾನ ನೀಡಬೇಕು ಎಂದು ಮಠಾಧೀಶರ ನಿಯೋಗ ಮನವಿ ಮಾಡಿದೆ.

Siddaramaiah SWAMIJI 1

ಮಠಾಧೀಶರು‌ ಸಿಎಂ ಭೇಟಿಗೂ ಮುನ್ನ ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B Patil) ಅವರ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಸಮುದಾಯದ ಸಚಿವರು, ಶಾಸಕರ ಸಭೆ ನಡೆಸಿದ್ದರು. ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಸಮುದಾಯದ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. ನಂತರ, ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿ ಮನವಿ ಸಲ್ಲಿಸಿದ್ದಾರೆ.

ಯುವ ಪೀಳಿಗೆಗೆ ಬಸವಣ್ಣ ಅವರನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೆಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕೆಂದು ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ 13ನೇ ಅಖಿಲಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಪರಮಪೂಜ್ಯರು, ಗಣ್ಯರು, ಚಿಂತಕರು, ಅಭಿಪ್ರಾಯಪಟ್ಟಿದ್ದರು. ನಂತರದಲ್ಲಿಯೂ ಈ ಕುರಿತು ಹಲವು ಸಭೆಗಳನ್ನು ನಡೆಸಿ ಹಿಂತಚಿಂತಕರೆಲ್ಲರ ಅಭಿಪ್ರಾಯಗಳನ್ನು ಕ್ರೋಢಿಕರಿಸಲಾಗಿದೆ. ಅದರಂತೆ, ಕಾರ್ಯಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಸಕ್ತ ಸಾಲಿನ ಬಜೆಟ್‌ನಿಂದಲೇ ಅಗತ್ಯ ಅನುದಾನ ಒದಗಿಸಬೇಕು ಎಂದು ಮನವಿ‌ ಮಾಡಿದ್ದಾರೆ.

Siddaramaiah SWAMIJI 2

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವಣ್ಣನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸಬೇಕು. ಜೊತೆಗೆ, ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ ‘ಶರಣ ದರ್ಶನ’ ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು ಎಂಬುದನ್ನು ಬಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಅವರು ಎಲ್ಲರ ಪರವಾಗಿ ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಎಲ್ಲ ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ‘ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ’ ರಚಿಸಬೇಕು. ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಸದ್ಬಳಕೆಯಾಗಲು ಅಲ್ಲಿಯೇ ‘ವಚನ ವಿಶ್ವವಿದ್ಯಾಲಯ’ ಮತ್ತು ಸಂಶೋಧನ ಕೇಂದ್ರ ಆರಂಭಿಸಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ಬಸವಭವನ’ ನಿರ್ಮಿಸಿ, ಅಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಅನುದಾನ ಒದಗಿಸುವ ಮೂಲಕ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಮುಂಬರುವ ಪೀಳಿಗೆಗಳಿಗೆ ಪರಿಚಯಿಸುವುದಕ್ಕೆ ಸಂಬಂಧಿಸಿದ ಈ ಕಾರ್ಯಯೋಜನೆಗಳಿಗೆ ಚಾಲನೆ ನೀಡಿ, ಇತಿಹಾಸ ಸದಾ ನೆನಪಿಸಿಕೊಳ್ಳುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ಮಠಾಧೀಶರು ಮನವಿ ಮಾಡಿದ್ದಾರೆ.

TAGGED:congresspoliticssiddaramaiahಮಠಾಧೀಶರ ನಿಯೋಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood
Actor Shivamanju
ನಿರ್ದೇಶಕನಾದ ಹಾಸ್ಯ ನಟ ಶಿವಮಂಜು
Cinema Latest Sandalwood Top Stories

You Might Also Like

Droupadi Murmu
Court

2 ವರ್ಷದ ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು

Public TV
By Public TV
2 minutes ago
haveri police suspend
Haveri

ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್; ಸವಣೂರು ಸಿಪಿಐ, ಹೆಡ್‌ ಕಾನ್‌ಸ್ಟೆಬಲ್ ಅಮಾನತು

Public TV
By Public TV
15 minutes ago
Pahalgam Terror Attack 2 1
Latest

TRF ಮುನ್ನಡೆಸುತ್ತಿದ್ದ ಪಾಕ್‌ ಉಗ್ರನೇ ಪಹಲ್ಗಾಮ್‌ ನರಮೇಧದ ಮಾಸ್ಟರ್‌ ಮೈಂಡ್‌: ಎನ್‌ಐಎ

Public TV
By Public TV
8 hours ago
Bengaluru Living heart transport
Bengaluru City

ಬೆಂಗ್ಳೂರು ಟ್ರಾಫಿಕ್ ನಡುವೆ ಜೀವಂತ ಹೃದಯ ರವಾನೆ – 7 ನಿಮಿಷದಲ್ಲೇ 10 ಕಿ.ಮೀ ಯಶಸ್ವಿ ಸಾಗಾಟ

Public TV
By Public TV
8 hours ago
Nagalakshmi Choudhary 2
Bengaluru City

ಗರ್ಭಕಂಠ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ ನೀಡಿ – ಆರೋಗ್ಯ ಸಚಿವರಿಗೆ ಮಹಿಳಾ ಆಯೋಗ ಪತ್ರ

Public TV
By Public TV
9 hours ago
kea
Bengaluru City

ಯುಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?