Connect with us

Crime

10ರ ಬಾಲೆಯ ಮೇಲೆ ಅತ್ಯಾಚಾರ ಎಸಗಿ, ರಸ್ತೆ ಬದಿ ಎಸೆದು ಹೋದ ದುಷ್ಕರ್ಮಿಗಳು!

Published

on

ನವದೆಹಲಿ: 10 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ ರಸ್ತೆ ಬದಿ ಎಸೆದು ಹೋಗಿರುವ ಅಮಾನವೀಯ ಘಟನೆ ದೆಹಲಿಯ ನ್ಯೂ ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗುರುವಾರ ರಾತ್ರಿ 10 ಗಂಟೆಗೆ ಸುಮಾರು ಮಯೂರ್ ವಿಹಾರದ ರಸ್ತೆ ಬದಿ ಬಾಲಕಿಯೊಬ್ಬಳು ಪ್ರಜ್ಞಾಹೀನವಾಗಿ ಬಿದ್ದಿದ್ದಳು. ಇದನ್ನು ನೋಡಿದ್ದ ಸ್ಥಳೀಯರೊಬ್ಬರು ಫೋನ್ ಕರೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ನ್ಯೂ ಅಶೋಕ್ ನಗರ ಠಾಣೆ ಪೊಲೀಸರು, ಬಾಲಕಿಯನ್ನು ಲಾಲ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಪಾಸಣೆ ಬಳಿಕ ವೈದ್ಯರು ತಿಳಿಸಿದ್ದಾರೆ.

ಬಾಲಕಿಯ ಕೊಲೆ ಯತ್ನಿಸಿದ್ದ ದುಷ್ಕರ್ಮಿಗಳು, ಕಣ್ಣು ಹಾಗೂ ಮುಖದ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಪೂರ್ವ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿದ್ದಾರೆ.

ಈ ಕುರಿತು ಪೊಲೀಸ್ ತನಿಖೆ ಆರಂಭಿಸಿದ್ದು, ಅಶೋಕ ನಗರ ಪೊಲೀಸ್ ಠಾಣೆ ಸಮೀಪದ ಮದ್ಯದ ಅಂಗಡಿಯ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv