ನವದೆಹಲಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಗೊಳಿಸಿದ 16 ವರ್ಷದ ಹುಡುಗನನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
Advertisement
ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 12 ವರ್ಷದ ಬಾಲಕಿ ಇದೀಗ ಗರ್ಭಿಣಿಯಾಗಿದ್ದು, ಆರೋಪಿ ತಮ್ಮ ಹತ್ತಿರ ಸಂಬಂಧಿಯಾಗಿದ್ದು, 10ನೇ ತರಗತಿಯಲ್ಲಿ ಓದುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಕಳೆದ ನವೆಂಬರ್‍ನಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆರೋಪಿ ತಮ್ಮ ಕುಟುಂಬಸ್ಥರೊಂದಿಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಿದ್ದಾಳೆ. ಇದನ್ನೂ ಓದಿ: ಗುರೂಜಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ – ಪೊಲೀಸ್ ಆಯುಕ್ತ ಲಾಭೂರಾಮ್
Advertisement
Advertisement
ಮೊದಲಿಗೆ ಈ ಬಗ್ಗೆ ಬಾಲಕಿ ಎಲ್ಲೂ ಹೇಳಿಕೊಂಡಿರಲಿಲ್ಲ. ಆದರೆ ಇತ್ತೀಚೆಗಷ್ಟೇ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ನಂತರ ಬಾಲಕಿಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಪೋಷಕರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.
Advertisement
ಇದೀಗ ಸಂತ್ರಸ್ತೆಯ ತಾಯಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 376(ಅತ್ಯಾಚಾರ) ಮತ್ತು ಪೋಕ್ಸೋ ಕಾಯಿದೆಯ ಸೆಕ್ಷನ್ 6ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ ಮತ್ತು ಹುಡುಗನನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ನಿರ್ಮಾಪಕನಿಗೆ ಮೆದುಳು ಸರ್ಜರಿ : ಚೇತರಿಸಿಕೊಳ್ಳುತ್ತಿದ್ದಾರೆ ಕಿಶೋರ್ ಪತ್ತಿಕೊಂಡ