ನವದೆಹಲಿ: ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ (Conversion Event) ಪಾಲ್ಗೊಂಡಿದ್ದ ದೆಹಲಿಯ ರಾಜ್ಯ ಸರ್ಕಾರದ ಸಚಿವರ ವಿರುದ್ಧ ಬಿಜೆಪಿ (BJP) ತೀವ್ರವಾಗಿ ಪ್ರತಿಭಟನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜೇಂದ್ರ ಪಾಲ್ ಗೌತಮ್ ಇಂದು ದೆಹಲಿ ಸಮಾಜ ಕಲ್ಯಾಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ರಾಜೇಂದ್ರ ಪಾಲ್ ಗೌತಮ್ (Rajendra Pal Gautam) ಟ್ವೀಟ್ ಮಾಡಿ ದೆಹಲಿಯ ಆಪ್ (AAP) ನೇತೃತ್ವದ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದನ್ನು ಅಧಿಕೃತವಾಗಿ ತಿಳಿಸಿದ್ದಾರೆ.
Advertisement
Advertisement
ಟ್ವೀಟ್‌ನಲ್ಲಿ ಏನಿದೆ?: ಇಂದು ಮಹರ್ಷಿ ವಾಲ್ಮೀಕಿ ಅವರ ಜಯಂತಿಯಾಗಿದೆ ಹಾಗೂ ಇಂದು ಮಾನ್ಯವರ್ ಕಾನ್ಶಿ ರಾಮ್ ಸಾಹೇಬ್ ಅವರ ಪುಣ್ಯತಿಥಿ ದಿನವಾಗಿದೆ. ಇಂತಹ ದಿನದಂದು ಕಾಕತಾಳೀಯವಾಗಿಯೇ ಇಂದು ನಾನು ಅನೇಕ ಸಂಕೋಲೆಗಳಿಂದ ಬಿಡುಗಡೆ ಹೊಂದಿದ್ದೇನೆ. ಇಂದು ನಾನು ಮತ್ತೆ ಹುಟ್ಟಿದ್ದೇನೆ. ಈಗ ನಾನು ಯಾವುದೇ ನಿರ್ಬಂಧಗಳಿಲ್ಲದೆ ಹೆಚ್ಚು ದೃಢವಾಗಿ ಸಮಾಜದ ಮೇಲಿನ ಹಕ್ಕುಗಳು ಮತ್ತು ದೌರ್ಜನ್ಯಗಳ ವಿರುದ್ಧ ಹೋರಾಡುವುದನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ.
Advertisement
आज महर्षि वाल्मीकि जी का प्रकटोत्सव दिवस है एवं दूसरी ओर मान्यवर कांशीराम साहेब की पुण्यतिथि भी है। ऐसे संयोग में आज मैं कई बंधनों से मुक्त हुआ और आज मेरा नया जन्म हुआ है। अब मैं और अधिक मज़बूती से समाज पर होने वाले अत्याचारों व अधिकारों की लड़ाई को बिना किसी बंधन के जारी रखूँगा pic.twitter.com/buwnHYVgG8
— Rajendra Pal Gautam (@AdvRajendraPal) October 9, 2022
Advertisement
ಶುಕ್ರವಾರ ದೆಹಲಿಯಲ್ಲಿ ನಡೆದ ಧಾರ್ಮಿಕ ಮತಾಂತರ ಸಮಾರಂಭದಲ್ಲಿ ರಾಜೇಂದ್ರ ಪಾಲ್ ಗೌತಮ್ ಭಾಗವಹಿಸಿದ್ದರು. ಅಷ್ಟೇ ಅಲ್ಲದೇ ಈ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ನಿಂದಿಸಲಾಗಿತ್ತು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವುದಾಗಿ ಮತ್ತು ಹಿಂದೂ ದೇವತೆಗಳನ್ನು ದೇವರೆಂದು ಪರಿಗಣಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆಯಲ್ಲಿ ಟಿಪ್ಪು ಸುಲ್ತಾನ್ ಪರ ಘೋಷಣೆ
ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಸಚಿವ ಸಂಪುಟದಲ್ಲಿದ್ದ ರಾಜೇಂದ್ರ ಪಾಲ್ ಗೌತಮ್ ಮೇಲೂ ವಾಗ್ದಾಳಿ ನಡೆಸಿತ್ತು. ಅಷ್ಟೇ ಅಲ್ಲದೇ ರಾಜೇಂದ್ರ ಪಾಲ್ ಗೌತಮ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ನಿಮ್ಮ ಮೇಲೆ ದಾಳಿ ಮಾಡುವವರ ಶಿರಚ್ಛೇದ ಮಾಡಿ, ಕೈಗಳನ್ನ ಕತ್ತರಿಸಿ- VHP ದ್ವೇಷ ಭಾಷಣ