ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ (Assembly Election) ಆಮ್ ಆದ್ಮಿ ಪಕ್ಷ (Aam Aadmi Party) 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
70 ವಿಧಾನಸಭಾ ಕ್ಷೇತ್ರಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಇಂದು (ನ.21) 11 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ.ಇದನ್ನೂ ಓದಿ: ಅದಾನಿ ವಿರುದ್ಧದ ಪ್ರಕರಣ: ಷೇರುಪೇಟೆಯಲ್ಲಿ ಅದಾನಿ ಸಮೂಹದ ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತ
Advertisement
Advertisement
ಬಿಜೆಪಿ ಹಾಗೂ ಕಾಂಗ್ರೆಸ್ ಬಿಟ್ಟು ಎಎಪಿ ಸೇರಿದ್ದ 6 ನಾಯಕರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ. ಬಿಜೆಪಿಯಿಂದ ಬ್ರಹ್ಮ ಸಿಂಗ್ ತನ್ವಾರ್, ಬಿಬಿ ತ್ಯಾಗಿ, ಅನಿಲ್ ಝಾ ಹಾಗೂ ಕಾಂಗ್ರೆಸ್‌ನಿಂದ ಜುಬೇರ್ ಚೌಧರಿ, ವೀರ್ ಸಿಂಗ್ ದಿಂಗನ್, ಸೋಮೇಶ್ ಶೋಕೀನ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು. ಇವರನ್ನು ಒಳಗೊಂಡಂತೆ ರಾಮ್ ಸಿಂಗ್ ನೇತಾಜಿ, ಗೌರವ್ ಶರ್ಮಾ, ಮನೋಜ್ ತ್ಯಾಗಿ, ದೀಪಕ್ ಸಿಂಘಾಲ್ ಹಾಗೂ ಸರಿತಾ ಸಿಂಗ್‌ರವರ ಹೆಸರು ಪಟ್ಟಿಯಲ್ಲಿದೆ.
Advertisement
2020 ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಮೂರು ಹಾಲಿ ಶಾಸಕರನ್ನು ಎಎಪಿ ಕೈಬಿಡಲು ನಿರ್ಧರಿಸಿದೆ.
Advertisement
First list of AAP candidates for Delhi Elections is OUT‼️
All the best to all the candidates ✌️🏻
फिर लायेंगे केजरीवाल ! 🔥#PhirLayengeKejriwal pic.twitter.com/YTbnqpzqEC
— AAP (@AamAadmiParty) November 21, 2024
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಎಎಪಿ ಸಂಚಾಲಕ ಗೋಪಾಲ್ ರೈ (Gopal Rai), ಈ 11 ಅಭ್ಯರ್ಥಿಗಳ ಪಟ್ಟಿಯೊಂದಿಗೆ ಚುನಾವಣಾ ಪ್ರಚಾರವನ್ನು ತ್ರೀವಗೊಳಿಸುತ್ತೇವೆ. 2020ರ ವಿಧಾನಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಪ್ರತಿಕ್ರಿಯೆ ಆಧಾರದ ಮೇಲೆ ಹಾಲಿ ಶಾಸಕರನ್ನು ಕೈಬಿಟ್ಟಿದ್ದೇವೆ. ಇದೀಗ ನಾವು ಅತ್ಯುತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.
2015ರ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ ಎಎಪಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. 2020ರ ಚುನಾವಣೆಯಲ್ಲಿ 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.ಇದನ್ನೂ ಓದಿ: 4 ಮಕ್ಕಳು ಹೆತ್ತರೆ 1 ಲಕ್ಷ ರೂ. ಬಹುಮಾನ – ಕೊಡವ ಸಮಾಜದಿಂದ ವಿಶಿಷ್ಟ ಆಫರ್