ದೆಹಲಿ: ಭಾರೀ ಕುತೂಹಲ ಮೂಡಿಸಿದ್ದ ದೆಹಲಿ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 54 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಿಸಿದೆ.
70 ಕ್ಷೇತ್ರಗಳ ದೆಹಲಿ ವಿಧಾನಸಭೆಗೆ ಮುಂದಿನ ತಿಂಗಳು ಫೆಬ್ರವರಿ 8ರಂದು ಚುನಾವಣೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಹಾಗೂ ಆಮ್ ಆದ್ಮಿ ಪಾರ್ಟಿ ಮೊದಲ ಲಿಸ್ಟ್ ರಿಲೀಸ್ ಮಾಡಿವೆ. ಕಾಂಗ್ರೆಸ್ ಕೂಡ ಶನಿವಾರ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
दिल्ली विधानसभा चुनाव के उम्मीदवारों की सूची।
सभी उम्मीदवारों को हार्दिक बधाई व शुभकामनाएं।
आप सब पूरी मेहनत के साथ दिल्ली मे काँग्रेस का परचम लहराएंगे ऐसी हम कामना करते हैं।
आइए मिलकर बनाएं कांग्रेस वाली दिल्ली। pic.twitter.com/TXeRMZLaXt
— Delhi Congress (@INCDelhi) January 18, 2020
ಆಮ್ ಆದ್ಮಿ ಪಾರ್ಟಿಯಿಂದ ಹೊರ ಬಂದು ಕಾಂಗ್ರೆಸ್‍ಗೆ ಸೇರಿದ್ದ ಅಲ್ಕಾ ಲಾಂಬಾ ಅವರು ಚಾಂದಿನಿ ಚೌಕ್‍ನಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಕ್ರಿಕೆಟರ್ ಕೀರ್ತಿ ಆಜಾದ್ ಪತ್ನಿ ಪೂನಂ ಆಜಾದ್ ಸಂಗಮ್ ವಿಹಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ದೆಹಲಿ ಮಾಜಿ ಸಚಿವ ಅಶೋಕ್ ಕುಮಾರ್ ಕೃಷ್ಣ ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪರ್ಧೆ ಮಾಡುತ್ತಿರುವ ನವದೆಹಲಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಎಎಪಿ ಎಲ್ಲ 70 ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ 57 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಿಸಿದೆ.
ಇದಕ್ಕೂ ಮುನ್ನ ದೆಹಲಿ ವಿಧಾನಸಭಾ ಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿತ್ತು. ದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದೇದರು ಪ್ರತಿಭಟನೆ ನಡೆಸುವ ಮೂಲಕ ಟಿಕೆಟ್‍ಗೆ ಆಗ್ರಹಿಸಿದ್ದರು.