ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ (Delhi Assembly Election) ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗ (Election Commission Of India) ಈ ವಾರ ಪೂರ್ವಸಿದ್ಧತಾ ಸಭೆಗೆ ಕರೆ ನೀಡಿದೆ. ಈ ಸಭೆಯ ಬಳಿಕ ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ದೆಹಲಿ ವಿಧಾನಸಭಾ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷ (AAP) ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಜೊತೆಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ.ಇದನ್ನೂ ಓದಿ: ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಅಲ್ಪಸಂಖ್ಯಾತರ ಪರ ಪ್ರಿಯಾಂಕಾ ಧ್ವನಿ
Advertisement
Advertisement
ಇನ್ನೂ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಬಿಜೆಪಿಯು ಈ ತಿಂಗಳ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಿದ್ದು, ಗಮನಾರ್ಹ ಸಂಖ್ಯೆಯಲ್ಲಿ ಹೊಸ ಮುಖಗಳನ್ನು ಹೊಂದಿರುವ ಸಾಧ್ಯತೆಯಿದೆ ಹಾಗೂ ಬಿಜೆಪಿ ದಿವಂಗತ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್ ವರ್ಮಾ ಅವರನ್ನು ಕಣಕ್ಕಿಳಿಸಬಹುದು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
Advertisement
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಮಾತನಾಡಿ, ಈಗಾಗಲೇ ಪಕ್ಷವು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ಗಾಗಿ ಎಲ್ಲಾ 70 ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರಿಂದ 2,000ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಮುಂದುವರಿದ ಹಂತದಲ್ಲಿದ್ದು, ಪ್ರತಿ ಕ್ಷೇತ್ರದಲ್ಲಿ ಮೂರು ಸಂಭಾವ್ಯರನ್ನು ಈಗಾಗಲೇ ಶಾರ್ಟ್ಲಿಸ್ಟ್ ಮಾಡಲಾಗಿದೆ ಎಂದು ಹೇಳಿದರು.
Advertisement
ಫೆಬ್ರವರಿಯಲ್ಲಿ ನಡೆಯಲಿರುವ 70 ಸದಸ್ಯರ ದೆಹಲಿ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ಬೃಹತ್ ಪ್ರಚಾರವನ್ನು ಆರಂಭಿಸಿದ್ದು, ಆಡಳಿತಾರೂಢ ಎಎಪಿಯ ಭದ್ರಕೋಟೆ ಎಂದು ಪರಿಗಣಿಸಲಾದ ನಗರಗಳಲ್ಲಿ ನೆಲೆಯೂರಲು ಸಿದ್ಧತೆಯನ್ನು ನಡೆಸಿದೆ.
ಬಿಜೆಪಿಯು 1998 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗುಳಿದಿದ್ದು, 2015 ರಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಆಡಳಿತಾರೂಢ ಎಎಪಿಯನ್ನು ತಳ್ಳಿಹಾಕಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಎಎಪಿ 2015 ಮತ್ತು 2020ರಲ್ಲಿ ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.ಇದನ್ನೂ ಓದಿ: ಫಾಲೋ ಆನ್‌ನಿಂದ ಭಾರತ ಬಚಾವ್ – ಕೊನೆಯ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ಉಳಿಸಿತು ಮಾನ!