ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಾವು 45 ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ಮಾಜಿ ಅಧ್ಯಕ್ಷ, ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಚುನಾವಣೆಯ ಪ್ರಚಾರದ ವೇಳೆ ದೆಹಲಿಯ ಜನರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ಸುಳ್ಳು ಭರವಸೆಗಳು, ಸಮಾಧಾನ ಮತ್ತು ಅರಾಜಕತೆ ಎದುರಿಸುತ್ತಿರುವ ದೆಹಲಿಗೆ ಈಗ ಅಭಿವೃದ್ಧಿಯ ಅಗತ್ಯವಿದೆ. ನಾವು ನೋಡಿದಂತೆ ಫೆಬ್ರವರಿ 11ರಂದು ಹೊರ ಬೀಳುವ ಫಲಿತಾಂಶದಲ್ಲಿ ಬಿಜೆಪಿ 45ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲಿದೆ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
Advertisement
चुनाव के दौरान दिल्ली की जनता से संवाद करने का मौका मिला। झूठे वादे, तुष्टिकरण और अराजकता से त्रस्त दिल्ली को अब बस विकास चाहिए।
दिल्ली में भाजपा के लिए जो समर्थन देखा है उससे ये साफ है कि 11फरवरी को भाजपा दिल्ली में 45 से अधिक सीट जीत कर सरकार बनाने जा रही है। #BJP45PlusInDelhi
— Amit Shah (@AmitShah) February 6, 2020
Advertisement
ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಅನೇಕ ನಾಯಕರು ದೆಹಲಿಯ ವಿವಿಧ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಇಂದು ಸಾರ್ವಜನಿಕ ಪ್ರಚಾರ, ಸಮಾವೇಶಕ್ಕೆ ತೆರೆ ಬೀಳುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಇಂದು ಅದಿಪುರ, ಸೀಮಾಪುರಿ ಹಾಗೂ ಹರಿನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ರೋಡ್ ಶೋ ಹಾಗೂ ಪ್ರಚಾರ ಕೈಗೊಂಡರು.
Advertisement
ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳ ಮತದಾನವು ಫೆಬ್ರವರಿ 8ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರ ಬೀಳಲಿದೆ. 2015ರ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ 67 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚಿಸಿತ್ತು. ಬಿಜೆಪಿ ಕೇವಲ 3 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ ಉಳಿದ ಪಕ್ಷಗಳಾದ ಕಾಂಗ್ರೆಸ್, ಸಮಾಜವಾದಿ ಪಕ್ಷ, ಶಿರೋಮಣಿ ಅಕಾಲಿಕ ದಳ, ಇಂಡಿಯ್ ನ್ಯಾಷನಲ್ ಲೋಕದಳ ಖಾತೆ ತೆರೆಯುವಲ್ಲಿ ವಿಫಲವಾಗಿದ್ದವು.
Advertisement
Few more pictures from the roadshow in Seemapuri. pic.twitter.com/Zkb2zTAZQX
— Amit Shah (@AmitShah) February 6, 2020