ನವದೆಹಲಿ: 2025 ರ ದೆಹಲಿ ವಿಧಾನಸಭಾ ಚುನಾವಣೆಗೆ (Delhi Assembly Election) ತನ್ನ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ (AAP) ಬಿಡುಗಡೆ ಮಾಡಿದೆ. ನವದೆಹಲಿಯಿಂದ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಕಲ್ಕಾಜಿಯಿಂದ ಮುಖ್ಯಮಂತ್ರಿ ಅತಿಶಿ ಅವರು ಸ್ಪರ್ಧಿಸಲಿದ್ದಾರೆ.
38 ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌರಭ್ ಭಾರದ್ವಾಜ್, ಗೋಪಾಲ್ ರೈ, ಸತ್ಯೇಂದ್ರ ಕುಮಾರ್ ಜೈನ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಪಕ್ಷದ ಇತರ ಪ್ರಮುಖ ನಾಯಕರು ಇದ್ದಾರೆ. ಇದನ್ನೂ ಓದಿ: 46 ವರ್ಷ ಹಳೆ ಕಾಲದ ಹಿಂದೂ ದೇವಾಲಯ ಪತ್ತೆ; ಸಂಭಲ್ ಮಸೀದಿ ಸುತ್ತ ಮುಂದುವರಿದ ತೆರವು ಕಾರ್ಯ
Advertisement
Advertisement
ರಾಷ್ಟ್ರ ರಾಜಧಾನಿಯ 70 ಸದಸ್ಯರ ವಿಧಾನಸಭೆಗೆ ಫೆಬ್ರವರಿ 2025 ರಲ್ಲಿ ಚುನಾವಣೆ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಸ್ವಂತ ಬಲದ ಮೇಲೆ ಪಕ್ಷ ಚುನಾವಣೆ ಎದುರಿಸಲಿದೆ ಎಂದಿದ್ದಾರೆ.
Advertisement
Advertisement
ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್‌ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಗೋಪಾಲ್ ರೈ ಅವರು ಬಾಬರ್‌ಪುರದಿಂದ ಕಣಕ್ಕಿಳಿದಿದ್ದಾರೆ. ಎಎಪಿಯ ಅಂತಿಮ ಪಟ್ಟಿಯು ಶಕುರ್ ಬಸ್ತಿಯಿಂದ ಸತ್ಯೇಂದ್ರ ಕುಮಾರ್ ಜೈನ್ ಮತ್ತು ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್ ಸ್ಪರ್ಧೆಯಲ್ಲಿದ್ದಾರೆ. ಇದನ್ನೂ ಓದಿ: ಸಂಭಲ್ ಮಸೀದಿ ಸುತ್ತ ಒತ್ತುವರಿ ತೆರವು ವೇಳೆ ಹಳೇ ಹಿಂದೂ ದೇಗುಲ ಪತ್ತೆ