ನವದೆಹಲಿ: ಇಲ್ಲಿನ ಉದ್ಯಮಿಯೊಬ್ಬರು (Business) ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ.
ದೆಹಲಿಯ ವುಡ್ ಬಾಕ್ಸ್ ಕೆಫೆಯ (Woodbox Cafe) ಸಹ-ಸಂಸ್ಥಾಪಕ ಪುನೀತ್ ಖುರಾನಾ ಅವರು ಇಲ್ಲಿನ ಮಾಡೆಲ್ ಟೌನ್ನ ಕಲ್ಯಾಣ್ ವಿಹಾರ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಹೊಸವರ್ಷಕ್ಕೂ ಮುನ್ನಾದಿನವೇ ತಾಯಿ, ನಾಲ್ವರು ಸಹೋದರಿಯರ ಹತ್ಯೆಗೈದ ಯುವಕ
Advertisement
Advertisement
ಖುರಾನಾ ಮತ್ತು ಅವರ ಪತ್ನಿ ಮಾಣಿಕಾ ಜಗದೀಶ್ ಪಹ್ವಾ ಜೊತೆಗಿನ ವಿಚ್ಛೇದನ ಹಾಗೂ ಕೆಫೆ ವ್ಯವಹಾರಕ್ಕೆ ಸಂಬಂಧಿಸಿದ ಗಲಾಟೆ ನಡುವೆಯೇ ಈ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿಯಲ್ಲಿ ವುಡ್ಬಾಕ್ಸ್ ಕೆಫೆ ಹೊಂದಿದ್ದ ದಂಪತಿ ಜಂಟಿಯಾಗಿ ವ್ಯವಹಾರ ನಡೆಸುತ್ತಿದ್ದರು. ಇಬ್ಬರ ನಡುವೆ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪ ಏರ್ಪಟ್ಟಿತ್ತು. ಅಲ್ಲದೇ ಇಬ್ಬರ ನಡುವೆ ಮೊದಲಿನಿಂದಲೂ ದಾಂಪತ್ಯ ಕಲಹವಿತ್ತು. ಇದೇ ಕಾರಣಕ್ಕೆ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರಿಬ್ಬರು 2016ರಲ್ಲಿ ಮದುವೆಯಾಗಿದ್ದರು, ಪತ್ನಿ ಮೇಲೆ ಖುರಾನಾಗೆ ಅಸಮಾಧಾನ ಇತ್ತು ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಈ ಮಧ್ಯೆ ಇಬ್ಬರ ನಡುವಿನ 16 ನಿಮಿಷಗಳ ಸಂಭಾಷಣೆಯ ಆಡಿಯೋವೊಂದು ಲಭ್ಯವಾಗಿದೆ. ಅದರಲ್ಲಿ ಇಬ್ಬರು ಕೆಫೆ ವ್ಯವಹಾರದ ವಿಚಾರವಾಗಿ ಜಗಳವಾಡುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಚುನಾವಣೆಯಲ್ಲಿ ʻಕೈʼ ಶಾಸಕ ನರೇಂದ್ರಸ್ವಾಮಿಗೆ ಐಶ್ವರ್ಯಗೌಡ ಹಣ ನೀಡಿದ್ದಾರೆ: ಅನ್ನದಾನಿ ಬಾಂಬ್
ಆಡಿಯೋದಲ್ಲಿ ನಾವಿಬ್ಬರೂ ಡಿವೋರ್ಸ್ ಪಡೆದುಕೊಳ್ಳೋಣ. ಆದ್ರೆ ವಿಚ್ಛೇದನದ ನಂತರವೂ ವ್ಯವಹಾರದಲ್ಲಿ ಪಾಲುದಾರಳಾಗಿರುತ್ತೇನೆ. ನೀವು ನನ್ನ ಬಾಕಿ ಸಾಲವನ್ನ ತೀರಿಸಬೇಕು ಎಂದು ಖುರಾನಾ ಪತ್ನಿ ಮನಿಕಾ ಹೇಳಿದ್ದಾರೆ. ಘಟನೆಯ ಬಳಿಕ ಪೊಲೀಸರು ಖುರಾನಾ ಪತ್ನಿಯ ಫೋನನ್ನು ವಶಕ್ಕೆ ಪಡೆದಿದ್ದು, ಆಕೆಯನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಮತ ಖರೀದಿ ಯತ್ನವನ್ನು ಆರ್ಎಸ್ಎಸ್ ಬೆಂಬಲಿಸುತ್ತದೆಯೇ – ಭಾಗವತ್ಗೆ ಕೇಜ್ರಿವಾಲ್ ಪ್ರಶ್ನೆ
ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಟೆಕ್ಕಿಯಾಗಿದ್ದ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದರು. ಸಾವಿಗೂ ಮೊದಲು ಅತುಲ್ ಸುಭಾಷ್ ಅವರು 24 ಪುಟಗಳ ಡೆತ್ನೋಟ್ ಬರೆದಿದ್ದು, ಅದನ್ನು ತಮ್ಮ ಕುಟುಂಬಸ್ಥರಿಗೆ ಕಳುಹಿಸಿದ್ದರು. ಅತುಲ್ ಸಾವು ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದಲ್ಲದೇ ಅನೇಕರು ಏಕಪಕ್ಷೀಯವಾಗಿರುವ ಕೌಟುಂಬಿಕ ವಿವಾಹ ಕಾಯ್ದೆಯ ಬಗ್ಗೆ ಚರ್ಚೆ ನಡೆಸುವಂತೆ ಮಾಡಿತ್ತು. ಅತುಲ್ ಸುಭಾಷ್ ಸಾವಿನ ನಂತರ ಅವರ ಪತ್ನಿ ನಿಖಿತಾ ಸಿಂಘಾನಿಯಾ ಆಕೆಯ ತಾಯಿ ಹಾಗೂ ಸೋದರನನ್ನು ಪೊಲೀಸರು ಬಂಧಿಸಿ 14 ದಿನಗಳ ನ್ಯಾಯಾಂಗ ಕಸ್ಟಡಿಯಲ್ಲಿರಿಸಿದ್ದು, ತನಿಖೆ ಮುಂದುವರಿದಿದೆ.