ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಮಹಿಳಾ ವಕ್ತಾರೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಲ್ಲದೇ ಮಹಿಳೆಯ ನಮ್ರತೆಗೆ ಧಕ್ಕೆ ತರುವ ವೀಡಿಯೋವನ್ನು ಆರೋಪಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಮಹಿಳೆಗೆ ಅವಮಾನ ಮಾಡುವ ಸಲುವಾಗಿ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ದೆಹಲಿ ಘಟಕ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಮತ್ತು 509 (ಮಹಿಳೆಯ ನಮ್ರತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತನೆ ಅಥವಾ ನುಡಿ) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯಿದೆಯ ಸೆಕ್ಷನ್-67 ಅಡಿ ನವದೆಹಲಿ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಕಬಿನಿ ಜಲಾಶಯದಲ್ಲಿ ಅಧಿಕ ನೀರು ಹೊರಕ್ಕೆ- ನಂಜನಗೂಡಿನಲ್ಲಿ ಪ್ರವಾಹ ಭೀತಿ
Advertisement
Advertisement
ಮಹಿಳಾ ವಕ್ತಾರೆ ವಿರುದ್ಧ ಆಕ್ಷೇಪಾರ್ಹ ಲೈಂಗಿಕ ಟೀಕೆಗಳನ್ನು ಮಾಡಲಾಗಿದ್ದು, ಅವರ ಪ್ರತಿಷ್ಠೆಗೆ ಹಾನಿ ಮಾಡುವ ಸಲುವಾಗಿ ಈ ಕೃತ್ಯ ಎಸಗಲಾಗಿದೆ. ಅಲ್ಲದೇ ಮಹಿಳೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಳೆದ ಎರಡು-ಮೂರು ತಿಂಗಳಿಂದ ಮಹಿಳೆಗೆ ಕಿಡಿಗೇಡಿಗಳ ಗ್ಯಾಂಗ್ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಲಾಗಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷ ಮನವಿ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗೊಟಬಯ ರಾಜಪಕ್ಸೆ ಇನ್ನೂ ದೇಶದಲ್ಲಿಯೇ ಇದ್ದಾರೆ: ಮಹಿಂದಾ ಯಾಪಾ ಅಬೇವರ್ಧನ