– ಸ್ಫೋಟದಲ್ಲಿ ಶಾಶ್ವತ ಅಂಗವಿಕಲರಿಗೆ 5 ಲಕ್ಷ & ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ
ನವದೆಹಲಿ: ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ಸಿಎಂ ವಿಚಾಸಿದರು.
ದೆಹಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯು ಇಡೀ ನಗರವನ್ನೇ ಆಘಾತಕ್ಕೆ ದೂಡಿದೆ. ಈ ಕಷ್ಟದ ಸಮಯದಲ್ಲಿ, ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುತ್ತದೆ ಎಂದು ಗುಪ್ತಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.

