ಪಾಟ್ನಾ: ವಿಮಾನ ಹಾರಾಟ ನಡೆಸುತ್ತಿದ್ದ ವೇಳೆ ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ನನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ರಂಪಾಟ ಮಾಡಿರುವ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದೆ.
Advertisement
ದೆಹಲಿಗೆ ಹೋಗುತ್ತಿದ್ದ ಇಂಡಿಗೋ ವಿಮಾನ 6E- 2126 ಪ್ರಯಾಣಿಸುತ್ತಿದ್ದ ರಿಷಿ ಚಂದ್ ಸಿಂಗ್ ಬೇಡಿ ನನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಸಹಪ್ರಯಾಣಿಕರಿಗೆ ಹೇಳಿದ್ದಾನೆ. ಇದರಿಂದ ಗಾಬರಿಗೊಂಡ ಸಿಬ್ಬಂದಿ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಬಳಿಕ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದಾಗ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದಿದೆ. ಇದನ್ನೂ ಓದಿ: ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Advertisement
Delhi-bound IndiGo flight grounded at Patna airport after bomb hoax, passenger detained
Read @ANI Story | https://t.co/Vh1ZLCS66G#PatnaAirport #BombHoax #DelhiBound pic.twitter.com/hvYR012YK6
— ANI Digital (@ani_digital) July 22, 2022
Advertisement
ರಿಷಿ ಚಂದ್ ಸಿಂಗ್ ಬೇಡಿ ಹುಸಿ ಬಾಂಬ್ ಬೆದರಿಕೆ ಬಳಿಕ ಅತನೊಂದಿಗೆ ಪ್ರಯಾಣಿಸುತ್ತಿದ್ದ ಕುಟುಂಬಸ್ಥರು ಆತನಿಗೆ ಥಳಿಸಿದ್ದಾರೆ. ಬಳಿಕ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ರಿಷಿ ಚಂದ್ ಸಿಂಗ್ ಬೇಡಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈತ ಮಾನಸಿಕ ಅಸ್ವಸ್ಥ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಆಗಸ್ಟ್ 13 ರಿಂದ 15ರವರೆಗೆ ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ: ಮೋದಿ ಕರೆ